ಪರಿಶಿಷ್ಟರ ಹಿತ ಕಾಪಾಡದಿದ್ದರೆ ತಕ್ಕ ಪಾಠ
Team Udayavani, Dec 3, 2018, 12:02 PM IST
ಬೆಂಗಳೂರು: ಬಡ್ತಿ ಮೀಸಲಾತಿ, ಶಿಕ್ಷಣ ಹಾಗೂ ಉದ್ಯೋಗದಲ್ಲಿನ ಮೀಸಲಾತಿ ಪ್ರಮಾಣ ಹೆಚ್ಚಳ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳದಿದ್ದರೆ ಆಡಳಿತ ಪಕ್ಷಗಳಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಚಾರಸಂಕಿರಣದಲ್ಲಿ ಮಾತನಾಡಿದ ಅವರು, “ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ’ ಪ್ರವೃತ್ತಿ ಬಿಟ್ಟು, ಸಮುದಾಯದ ಹಿತ ಕಾಪಾಡುವ ಪಕ್ಷಕ್ಕೆ ಜೈಕಾರ ಹಾಕುವುದನ್ನು ವಾಲ್ಮೀಕಿ ಸಮುದಾಯ ಕಲಿಯಬೇಕು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಆಡಳಿತ ಪಕ್ಷಗಳಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಸಮುದಾಯ ತಕ್ಕ ಪಾಠ ಕಲಿಸಲಿದೆ. ಇದು ಕುಮಾರಸ್ವಾಮಿಯವರಿಗೆ ನನ್ನ ನೇರ ಎಚ್ಚರಿಕೆ ಎಂದು ಹೇಳಿದರು.
ಪರಿಶಿಷ್ಟ ಜನಾಂಗಗಳಿಗೆ ಸಂವಿಧಾನಬದ್ಧವಾಗಿ ಸಿಗಬೇಕಿರುವ ಹಕ್ಕುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಡಲೇಬೇಕು. ಇದಕ್ಕಾಗಿ ಪರಿಶಿಷ್ಟ ಜಾತಿ, ಪಂಗಡ ಸಮುದಾಯದ ಜನಪ್ರತಿನಿಧಿಗಳು ಒಟ್ಟಾಗಬೇಕು. ಸಂವಿಧಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಾಜಕೀಯ ಮೀಸಲಾತಿ ಕಲ್ಪಿಸಿರುವುದು ಚುನಾವಣೆಯಲ್ಲಿ ಗೆದ್ದು, ಹಣ ಸಂಪಾದಿಸಿ ಶೋಕಿ ಮಾಡಲು ಅಲ್ಲ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡದ 51 ಶಾಸಕರು, ಏಳು ಸಂಸದರಿದ್ದಾರೆ. ಇವರೆಲ್ಲರೂ ಒಗ್ಗಟ್ಟಾದರೆ ಹಕ್ಕುಗಳನ್ನು ಪಡೆಯುವುದು ಕಷ್ಟವಲ್ಲ. ಒಂದು ವೇಳೆ ಸರ್ಕಾರಗಳು ಸ್ಪಂದಿಸದಿದ್ದರೆ ಯಾರೇ ಮುಖ್ಯಮಂತ್ರಿಯಾಗಿರಲಿ, ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅದನ್ನು ಮುಲಾಜಿಲ್ಲದೆ ಕಿತ್ತೂಗೆಯಬೇಕು ಎಂದು ಸ್ವಾಮೀಜಿ ಕರೆ ನೀಡಿದರು.
ಬಿಜೆಪಿ ಶಾಸಕರಿಗೆ ಏನಾಗಿದೆ: ಸಮ್ಮಿಶ್ರ ಸರ್ಕಾರ ಇರುವುದರಿಂದ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ರಾಜಕೀಯ ಮುಲಾಜು ಇರಬಹುದು. ಆದರೆ, ಪ್ರತಿಪಕ್ಷ ಬಿಜೆಪಿಯಲ್ಲಿರುವ ಪರಿಶಿಷ್ಟ ಪಂಗಡದ ಶಾಸಕರಿಗೆ ಏನಾಗಿದೆ? ಅವರಿಗ್ಯಾವ ಮುಲಾಜಿದೆ ಎಂದು ಅರ್ಥವಾಗುತ್ತಿಲ್ಲ. ಬಿಜೆಪಿಯ 9 ಶಾಸಕರು ಅಧಿವೇಶನದಲ್ಲಿ ಸದನದ ಬಾವಿಗಿಳಿದು ಸಮುದಾಯದ ಬೇಡಿಕೆಗಳಿಗೆ ಪಟ್ಟು ಹಿಡಿಯಲಿ ಎಂದು ಕರೆ ನೀಡಿದ ಸ್ವಾಮೀಜಿ, ಬಿಜೆಪಿ ಶಾಸಕರು ಏನೂ ಮಾಡದಿರುವುದು ವಾಲ್ಮೀಕಿ ಸಮುದಾಯದ “ಕರ್ಮ’ ಎಂದು ಬೇಸರ ವ್ಯಕ್ತಪಡಿಸಿದರು.
ಅಶೋಕ್ ಕುರಿಯಾರ್, ಎ. ತಿಪ್ಪೇಸ್ವಾಮಿ ವಿಷಯ ಮಂಡಿಸಿದರು. ಜಲಮಂಡಳಿ ಪ್ರಧಾನ ಎಂಜಿನಿಯರ್ ಕೆಂಪರಾಮಯ್ಯ, ರಾಜ್ಯ ಬುಡುಕಟ್ಟು ಸಂಶೋಧನಾ ಕೇಂದ್ರದ ನಿರ್ದೇಶಕ ಟಿ.ಟಿ. ಬಸವನಗೌಡ, ಎಸಿಪಿ ಎಂ.ಜಿ. ಪಂಪಾಪತಿ, ಕರ್ನಾಟಕ ವಾಲ್ಮೀಕಿ ಮಹರ್ಷಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ. ರಾಘವೇಂದ್ರ ಉಪಸ್ಥಿತರಿದ್ದರು.
ಎಚ್.ಡಿ. ಕುಮಾರಸ್ವಾಮಿಯವರು ಕೇವಲ ಒಕ್ಕಲಿಗರಿಗೆ ಮುಖ್ಯಮಂತ್ರಿಯಲ್ಲ. ನಾಡಿನ ಆರೂವರೆ ಕೋಟಿ ಜನರ ಮುಖ್ಯಮಂತ್ರಿ. ಪರಿಶಿಷ್ಟ ವರ್ಗಗಳ ಬಗ್ಗೆ ಭಾಷಣ ಮಾಡುತ್ತಾ ರಾಜಕೀಯ ಮಾಡುವುದನ್ನು ಬಿಟ್ಟು ಸಮಸ್ಯೆಗಳಿಗೆ ಪರಿಹಾರ ದೊರಕಿಸಬೇಕು.
-ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠ
ಸಂವಿಧಾನ, ಸುಪ್ರೀಂಕೋರ್ಟ್, ಸರ್ಕಾರದ ಆದೇಶಗಳು ನಮ್ಮ ಪರವಾಗಿವೆ. ಆದರೆ, ಸರ್ಕಾರ ನಮ್ಮ ಪರ ಇಲ್ಲ. ಸಮ್ಮಿಶ್ರ ಸರ್ಕಾರ ನಮಗೆ ಕೊಡಬಾರದ ಕಷ್ಟ ಕೊಡುತ್ತಿದೆ. ನಮ್ಮದಲ್ಲದ ತಪ್ಪಿಗೆ ಸರ್ಕಾರ ನಮ್ಮನ್ನು ಜೀವಂತ ಸುಡುತ್ತಿದೆ.
-ಎ.ತಿಪ್ಪೇಸ್ವಾಮಿ, ರಾಜ್ಯ ಪ.ಪಂಗಡಗಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.