20ರ ಬಳಿಕ ಪೊಲೀಸ್ ಅಧಿಕಾರಿಗಳ ಸಭೆ
Team Udayavani, Dec 15, 2017, 7:15 AM IST
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಮಾಜ ಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣದ ಮೂಲಕ ವದಂತಿ ಹಬ್ಬಿಸುವ ಸಾಧ್ಯತೆಗಳಿರುವುದರಿಂದ ಆ ಬಗ್ಗೆ ಎಚ್ಚರಿಕೆ ವಹಿಸಬೇಕು.ಆಯಾ ಜಿಲ್ಲೆಗಳಲ್ಲಿ ರೌಡಿ ಪಟ್ಟಿಯಲ್ಲಿರುವವರ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ಹೇಳಲಾಗಿದೆ.
ಇದೇ ಸಂಬಂಧ ಡಿ.20ರ ನಂತರ ಬೆಂಗಳೂರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ, ಇತ್ತೀಚಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಕೆಲವೊಂದು ಸೂಚನೆಗಳನ್ನು ನೀಡಬೇಕಿದೆ. ಡಿ.20 ರ ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
MUST WATCH
ಹೊಸ ಸೇರ್ಪಡೆ
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.