Head Constable: ಅಪಘಾತದಲಿ ಗಾಯಗೊಂಡಿದ್ಲ ಪೊಲೀಸ್ ಸಾವು
Team Udayavani, Dec 2, 2024, 12:48 PM IST
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾಗಡಿ ರಸ್ತೆ ಸಂಚಾರ ಠಾಣೆಯ ಹೆಡ್ ಕಾನ್ ಸ್ಟೇಬಲ್ ಮಹೇಶ್ ಅವರು ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.
ನೆಲಮಂಗಲ ಮೂಲದ ಮಹೇಶ್ 2003ರ ಬ್ಯಾಚ್‌ನ ಕಾನ್ ಸ್ಟೇಬಲ್ ಆಗಿದ್ದು, ಪೀಣ್ಯ ಕಾನೂನು ಮತ್ತು ಸುವ್ಯವಸ್ಥೆ ಠಾಣೆ ಸೇರಿ ನಗರದ ಹಲವಾರು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಾಲ್ಕೂವರೆ ವರ್ಷಗಳಿಂದ ಮಾಗಡಿ ರಸ್ತೆ ಸಂಚಾರ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನೆಲಮಂಗಲದಿಂದಲೇ ನಿತ್ಯ ಕರ್ತವ್ಯಕ್ಕೆ ಬರುತ್ತಿದ್ದರು. ನ.19ರಂದು ರಸ್ತೆ ಅಪಘಾತ ಸಂಬಂಧ ವಾಹನವೊಂದರ ವಿಳಾಸ ಪತ್ತೆ ಕಾರ್ಯದಲ್ಲಿ ತೊಡಗಿದ್ದರು. ಹೀಗಾಗಿ ಬೆಳಗ್ಗೆ 10.30ರ ಸುಮಾರಿಗೆ ನೆಲಮಂಗಲದಿಂದ ಬೆಂಗಳೂರಿಗೆ ಬರುವಾಗ ಏಕಾಏಕಿ ಎದುರು ಬಂದ ಲಾರಿ ಮಹೇಶ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ತಲೆ, ಮುಖ ಹಾಗೂ ಎದೆ ಭಾಗದಲ್ಲಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಕೆಲ ದಿನಗಳಿಂದ ಕೋಮಾದಲ್ಲಿ ಇದ್ದರು. ಆದರೆ, ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಗೆ ತಾಯಿ, ಪತ್ನಿ ಲತಾ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಇನ್ನು ರಸ್ತೆ ಅಪಘಾತ ಸಂಬಂಧ ಲಾರಿ ಚಾಲಕನನ್ನು ನೆಲಮಂಗಲ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.