ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ರಾತ್ರಿ ಆಸ್ಪತ್ರೆಯಿಂದ ಪರಾರಿ
Team Udayavani, Aug 3, 2017, 11:45 AM IST
ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೈದಿಯೊಬ್ಬ ಮಂಗಳವಾರ ರಾತ್ರಿ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಸ್ತಿಕುಮಾರ್ (35) ಪರಾರಿಯಾದವ. ಈ ಸಂಬಂಧ ವಿವಿ ಪುರಂ ಠಾಣೆಯಲ್ಲಿ ಜೈಲು ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಪತ್ನಿಯ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಸ್ತಿಕುಮಾರ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸುತ್ತಿದ್ದ. ಜು.29 ರಂದು ಜೈಲಿನಲ್ಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಆತನಿಗೆ, ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಜೈಲಿನ ಇಬ್ಬರು ಸಿಬ್ಬಂದಿಯನ್ನು ಈತನ ಕಾವಲಿಗೆ ಇರಿಸಲಾಗಿತ್ತು.
ಕಾವಲಿಗಿದ್ದ ಭದ್ರತಾ ಸಿಬ್ಬಂದಿ ಪಾಳಿ ಬದಲಾವಣೆ ಸಂದರ್ಭದಲ್ಲಿ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮಾಸ್ತಿ ಕೊಳ ಕಳಚಿಕೊಂಡು ಪರಾರಿಯಾಗಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆಸ್ಪತ್ರೆ ಸುತ್ತಮುತ್ತ ಎಲ್ಲೆಡೆ ಹುಡುಕಾಡಿದ್ದಾರೆ. ಸಿಗದಿದ್ದಾಗ ಬಳಿಕ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಿ ವಿವಿ ಪುರಂ ಠಾಣೆಗೆ ದೂರು ನೀಡಿದ್ದಾರೆ ಎಂದು ಡಾ.ಎಸ್.ಡಿ.ಶರಣಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ
Bengaluru: ಬಸ್ ಕಂಡಕ್ಟರ್, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ
Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್ ದುರ್ಮರಣ
MUST WATCH
ಹೊಸ ಸೇರ್ಪಡೆ
Chandigarh: ಕೋಟೆ ಕಟ್ಟಿದ ಗುತ್ತಿಗೆದಾರನಿಗೆ ರೋಲೆಕ್ಸ್ ವಾಚ್ ಉಡುಗೊರೆ
Pune: 300ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿ ಟೆಸ್ಲಾದಲ್ಲಿ ಉದ್ಯೋಗ ಪಡೆದ
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!
Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.