ಸಿಎಂ ವಿರುದ್ಧದ ಖಾಸಗಿ ದೂರು ವಜಾ
Team Udayavani, Nov 25, 2017, 10:31 AM IST
ಬೆಂಗಳೂರು: ಕಾನೂನು ಬಾಹಿರವಾಗಿ ಗಣಿ ಕಂಪನಿಗಳ ಪರವಾನಗಿ ನವೀಕರಣ ಮಾಡಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿದ್ದ ಖಾಸಗಿ ದೂರನ್ನು ಸಿಬಿಐ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಈ ಕುರಿತು ಆರ್ಟಿಐ ಕಾರ್ಯಕರ್ತ ರಾಮಮೂರ್ತಿಗೌಡ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ಪ್ರತಿವಾದಿಗಳ ವಿರುದ್ಧ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಒದಗಿಸುವಲ್ಲಿ ದೂರುದಾರರು ವಿಫಲರಾಗಿದ್ದಾರೆ ಎಂದು ದೂರು ವಜಾಗೊಳಿಸಿತು.
ಆರೋಪ: ಗಣಿ ಮತ್ತು ಖನಿಜ ಅಭಿವೃದ್ಧಿ ಮತ್ತು ನಿಯಂತ್ರಣ ತಿದ್ದುಪಡಿ ಕಾಯಿದೆ ಅನ್ವಯ ಗಣಿ ಕಂಪನಿಗಳ ಪರವಾನಗಿ ನವೀಕರಿಸುವ ಮೊದಲು ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ಸಿಎಂ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಮಾಜಿ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಳ್ಳಾರಿಯ ವೀರಭದ್ರಪ್ಪ ಸಂಗಪ್ಪ ಆ್ಯಂಡ್ ಕಂಪನಿ, ತುಮಕೂರು ಮಿನರಲ್ಸ್ ಪ್ರೈ.ಲಿ,
ರಾಮಗಢ ಮಿನರಲ್ಸ್ ಪ್ರೈ.ಲಿ ಸೇರಿದಂತೆ ಗಣಿ ಕಂಪನಿಗಳಿಗೆ ಪರವಾನಗಿ ನೀಡಿದ್ದಾರೆ. ಈ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಸಿಎಂ, ತುಷಾರ್ ರಂಗನಾಥ್ ಹಾಗೂ ಗಣಿ ಕಂಪನಿಗಳ ಮಾಲೀಕರು ಸೇರಿದಂತೆ 11 ಮಂದಿಯ ವಿರುದ್ಧ ಸಿಬಿಐ ತನಿಖೆಗೆ ನಿರ್ದೇಶಿಸುವಂತೆ ದೂರಿನಲ್ಲಿ ಕೋರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.