ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ
Team Udayavani, Aug 3, 2019, 3:04 AM IST
ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಮಾರ್ಪಾಡುಗೊಳಿಸಿರುವ ಹೈಕೋರ್ಟ್, 25 ವರ್ಷದವರೆಗೆ ಬಿಡುಗಡೆಗೆ ಅವಕಾಶವಿಲ್ಲದ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಸಂಬಂಧ ಮರಣದಂಡನೆ ಶಿಕ್ಷೆ ವಿಧಿಸಿ ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಕೋರಿ ಆರೋಪಿ ಸಲೀಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ.ರವಿ ಮಳಿಮಠ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು.
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆರೋಪಿ ಸಲೀಂಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು 25 ವರ್ಷದ ವರೆಗೆ ಬಿಡುಗಡೆಗೆ ಅವಕಾಶವಿಲ್ಲದ ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ತೀರ್ಪು ನೀಡಿದೆ.
ಪ್ರಕರಣವೇನು?: 2012ರ ಆ.15ರಂದು ಸಲೀಂ ರಾಮನಗರ ಜಿಲ್ಲೆಯ ತಾವರೆಕರೆಯಲ್ಲಿ 9 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ. ಪ್ರಕರಣದ ಸಂಬಂಧ ಸಲೀಂ ವಿರುದ್ಧ 23ಕ್ಕೂ ಅಧಿಕ ಮಂದಿ ನುಡಿದಿದ್ದ ಸಾಕ್ಷಿ ಹಾಗೂ ಎಫ್ಎಸ್‌ಎಲ್ ವರದಿ ಆಧರಿಸಿ ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಇದನ್ನು ರದ್ದುಕೋರಿ ಸಲೀಂ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.