ಪ್ರಭಾವಿಗಳ ಖರ್ಚಿನ ಮೇಲೆ ಕಣ್ಣಿಡಲು ವಿಶೇಷ ತಂಡ
Team Udayavani, Apr 22, 2018, 12:21 PM IST
ಬೆಂಗಳೂರು: ರಾಜಧಾನಿಯ 28 ವಿಧಾನಸಭೆ ಕ್ಷೇತ್ರಗಳ ಪೈಕಿ ಜಿದ್ದಾಜಿದ್ದಿನ ಕಣ ಎಂದೇ ಬಿಂಬಿತವಾಗಿರುವ ಹಾಗೂ ಪ್ರಭಾವಿ ನಾಯಕರು ಸ್ಪರ್ಧಿಸುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಮಾಡುವ ಖರ್ಚು, ವೆಚ್ಚಗಳ ಮೇಲೆ ಹದ್ದಿನ ಕಣ್ಣಿರಿಸಲು ಚುನಾವಣಾ ಆಯೋಗ ಅಧಿಕಾರಿಗಳನ್ನು ನೇಮಿಸಿದೆ.
ರಾಜರಾಜೇಶ್ವರಿ ನಗರ, ಶಿವಾಜಿನಗರ, ಚಿಕ್ಕಪೇಟೆ, ಪದ್ಮನಾಭನಗರ, ಬಿಟಿಎಂ ಬಡಾವಣೆ, ಚಾಮರಾಜಪೇಟೆ, ಸರ್ವಜ್ಞನಗರ, ಮಹದೇವಪುರ, ಕೆ.ಆರ್.ಪುರ ಹಾಗೂ ಯಶವಂತಪುರ ಕ್ಷೇತ್ರಗಳಲ್ಲಿ ಒಂದೊಂದು ಕ್ಷೇತ್ರಕ್ಕೆ ಪ್ರತ್ಯೇಕ ಅಧಿಕಾರಿ ನಿಯೋಜಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ವೆಚ್ಚಗಳ ಮಾಹಿತಿ ಪಡೆಯಲು ಹಾಗೂ ನಿಯಮ ಮೀರಿ ಹಣ ಖರ್ಚು ಮಾಡುವವರ ಮೇಲೆ ನಿಗಾವಹಿಸಲು ಎರಡು ಕ್ಷೇತ್ರಗಳಿಗೆ ಒಬ್ಬರಂತೆ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿ ನೇಮಿಸಲಾಗಿದೆಯಾದರೂ ಹತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತ್ಯೇಕ ಅಧಿಕಾರಿ ನೇಮಿಸಲಾಗಿದೆ.
ಉಳಿದಂತೆ, ಅಭ್ಯರ್ಥಿಗಳ ಖರ್ಚು ವೆಚ್ಚಗಳ ಪರಿಶೀಲನೆಗಾಗಿ 28 ವಿಧಾನಸಭಾ ಕ್ಷೇತ್ರಗಳಿಗೆ 19 ಮಂದಿ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿಗಳನ್ನು ಚುನಾವಣಾ ಆಯೋಗವು ನೇಮಿಸಲಾಗಿದ್ದು, ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಹ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ.
ಪ್ರಭಾವಿ ನಾಯಕರು ಸ್ಪರ್ಧಿಸುವ, ನಿಗದಿಗಿಂತ ಹೆಚ್ಚು ಖರ್ಚು-ವೆಚ್ಚ ಮಾಡುವುದು ಸೇರಿದಂತೆ ಈ ಹಿಂದಿನ ಚುನಾವಣೆಗಳಲ್ಲಿ ನಡೆದಿರುವಂತಹ ಘಟನೆಗಳು ಹಾಗೂ ದಾಖಲಾಗಿರುವ ಪ್ರಕರಣಗಳ ಆಧಾರದ ಮೇಲೆ ಕೆಲವೊಂದು ವಿಧಾನಸಭಾ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ 28 ಲಕ್ಷ ರೂ.ವರೆಗೆ ವೆಚ್ಚ ಮಾಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಅದನ್ನು ಮೀರಿ ವೆಚ್ಚ ಮಾಡುವುದು, ಮತದಾರರ ಮೇಲೆ ಒತ್ತಡ ಹೇರುವುದು, ಮತದಾರರಿಗೆ ಆಮೀಷವೊಡ್ಡುವುದು, ಹಣ, ಮದ್ಯ ಹಾಗೂ ಇತರೆ ವಸ್ತುಗಳ ಹಂಚಿಕೆಗಳ ಕುರಿತು ಸಾರ್ವಜನಿಕರು ಚುನಾವಣಾ ಆಯೋಗದ ವತಿಯಿಂದ ಅಭಿವೃದ್ಧಪಡಿಸಿರುವ ಅಥವಾ ಕಂಟ್ರೋಲ್ ರೂಂಗೆ ಕರೆ ಮಾಹಿತಿ ಮಾಹಿತಿ ನೀಡಬಹುದಾಗಿದೆ.
ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಲು 19 ಮಂದಿ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿಗಳನ್ನು, 14 ಮಂದಿ ಸಾಮಾನ್ಯ ವೀಕ್ಷಕ ಅಧಿಕಾರಿಗಳು ಹಾಗೂ ಪ್ರತಿ ಏಳು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬರಂತೆ ಪೊಲೀಸ್ ವೀಕ್ಷಕರನ್ನು ನೇಮಿಸಲಾಗಿದೆ.
-ಎನ್.ಮಂಜುನಾಥ ಪ್ರಸಾದ್, ಜಿಲ್ಲಾ ಚುನಾವಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.