Fraud: ಉದ್ಯೋಗಿಗೆ ವಂಚಿಸಿ ವಿದೇಶಕ್ಕೆ ಹಾರಿದ್ದ ಟೆಕಿ ಸೆರೆ

Team Udayavani, Dec 9, 2023, 10:50 AM IST

Fraud: ಉದ್ಯೋಗಿಗೆ ವಂಚಿಸಿ ವಿದೇಶಕ್ಕೆ ಹಾರಿದ್ದ ಟೆಕಿ ಸೆರೆ

ಬೆಂಗಳೂರು: ವಿವಾಹ ಆಗುವುದಾಗಿ ನಂಬಿಸಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ವಂಚಿಸಿ ಕೋರ್ಟ್‌ಗೂ ಹಾಜರಾಗದೇ ಅಬುದಾಬಿಯಲ್ಲಿ ತಲೆಮರೆಸಿಕೊಂಡಿದ್ದ ಸಾಫ್ಟ್ ವೇರ್‌ ಎಂಜಿನಿಯರ್‌ನನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ಕೇರಳದ ಕಣ್ಣೂರು ಮೂಲದ ಮಿಧುನ್‌ ಚಂದ್ರನ್‌ (32) ಬಂಧಿತ.

ಈತನ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಸಹ ಜಾರಿಗೊಳಿಸಲಾಗಿತ್ತು. ಮಿಧುನ್‌ ಚಂದ್ರನ್‌ ಬೆಂಗಳೂರಿನಲ್ಲಿ ವ್ಯಾಸಂಗ ಮಾಡಿ ವೈಟ್‌ ಫೀಲ್ಡ್‌ನಲ್ಲಿರುವ ಕಂಪನಿಯೊಂದರಲ್ಲಿ ಸಾಫ್ಟ್ ವೇರ್‌ ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ. 2016ರಲ್ಲಿ ಅದೇ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆಯನ್ನು ವಿವಾಹವಾಗುವುದಾಗಿ ನಂಬಿಸಿದ್ದ. ಬಿಟಿಎಂ ಲೇಔ ಟ್‌ನಲ್ಲಿದ್ದ ಮನೆಗೆ ಮಹಿಳೆಯನ್ನು ಕರೆ ದೊಯ್ದು ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದ್ದ.

ಷರತ್ತು ಬದ್ದ ಜಾಮೀನು ಪಡೆದಿದ್ದ: ಆರೋಪಿಯ ತಾಯಿಯೂ ಮಗನ ಜೊತೆ ಮದುವೆ ಮಾಡಿ ಸುವುದಾಗಿ ದೂರುದಾರ ಮಹಿಳೆಗೆ ಆಶ್ವಾಸನೆ ಕೊಟ್ಟು ಆತನಿಗೆ ಹಣದ ಸಹಾಯ ನೀಡುವಂತೆ ಕೋರಿದ್ದರು. ಬಳಿಕ ವರಸೆ ಬದಲಿಸಿದ ಮಿಧುನ್‌ ಚಂದ್ರನ್‌ ಮಹಿಳೆಯನ್ನು ವಿವಾಹವಾಗಲು ಒಪ್ಪದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ, ದೈಹಿಕ ಹಿಂಸೆ ನೀಡಿ ಪ್ರಾಣ ಬೆದರಿಕೆ ಹಾಕಿದ್ದ. 2020 ಫೆಬ್ರುವರಿಯಲ್ಲಿ ಈ ಬಗ್ಗೆ ಮಹದೇವಪುರ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಳು. ಇದರ ಬೆನ್ನಲ್ಲೇ ಆರೋಪಿ ಮಿಧುನ್‌ ಚಂದ್ರನ್‌ ನ್ಯಾಯಾಲಯದಿಂದ ಷರತ್ತು ಬದ್ದ ಜಾಮೀನು ಪಡೆದಿದ್ದ. ನಂತರ ಅಬುದಾಬಿಗೆ ತೆರಳಿ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ.

ಆರೋಪಿ ಸಿಕ್ಕಿ ಬಿದ್ದಿದ್ದು ಹೇಗೆ ?: ಇತ್ತ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಚಾರ್ಜ್‌ಶೀಟ್‌ ಸಲ್ಲಿಕೆಯಾದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆಗ ನ್ಯಾಯಾಲಯವು ಆತನಿಗೆ ಸಮನ್ಸ್‌ ಜಾರಿ ಮಾಡಿತ್ತು. ಇದಕ್ಕೂ ಆರೋಪಿ ಪ್ರತಿಕ್ರಿಯಿಸದಿದ್ದಾಗ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಲಾಗಿತ್ತು. ಇಷ್ಟಾದರೂ ನ್ಯಾಯಾಲಯದತ್ತ ಮುಖ ಮಾಡದಿದ್ದಾಗ ಆರೋಪಿಯ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಲಾಗಿತ್ತು. ಆತ ವಿದೇಶಕ್ಕೆ ತೆರಳಿರುವುದನ್ನು ಅರಿತ ಮಹದೇವಪುರ ಪೊಲೀಸರು ಸಿಬಿಐ ಮೂಲಕ ಇಂಟರ್‌ಪೋಲ್‌ಗೆ ಮಾಹಿತಿ ನೀಡಿದ್ದರು. 20 ದಿನಗಳ ಹಿಂದೆ ಆರೋಪಿಯು ಯಾವುದೋ ದಾಖಲೆಗಾಗಿ ಅಬುದಾಬಿಯ ರಾಯಭಾರ ಕಚೇರಿಗೆ ಹೋಗಿದ್ದ. ಆ ವೇಳೆ ಆತನ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಇರುವುದು ಪತ್ತೆಯಾಗಿತ್ತು. ಕೂಡಲೇ ಇಂಟರ್‌ಪೋಲ್‌ ಅಧಿಕಾರಿಗಳು ಮಿಧುನ್‌ ಚಂದ್ರನ್‌ನನ್ನು ವಶಕ್ಕೆ ಪಡೆದು ಮಹದೇವಪುರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅಬುದಾಬಿಯಿಂದ ಕರೆ ತಂದ ಪೊಲೀಸರು: ಮಹದೇವಪುರ್‌ ಇನ್‌ಸ್ಪೆಕ್ಟರ್‌ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳು ದುಬೈ ಪೊಲೀಸರ ಜೊತೆಗೆ ಸಂಪರ್ಕ ಸಾಧಿಸಿ ಅಬುದಾಬಿಗೆ ತೆರಳಿದ್ದರು. ನಂತರ ಅಬುದಾಬಿಯಲ್ಲಿ ಕೆಲವೊಂದು ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಶುಕ್ರವಾರ ವಿಮಾನದಲ್ಲಿ ಮಿಧುನ್‌ ಚಂದ್ರನ್‌ನನ್ನು ಬೆಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮಿದುನ್‌ ಚಂದ್ರನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

ಏನಿದು ರೆಡ್‌ ಕಾರ್ನರ್‌ ನೋಟಿಸ್‌ ?: ರೆಡ್‌ಕಾರ್ನರ್‌ ನೋಟಿಸ್‌ ಹೊರಡಿಸಿದರೆ ಎಲ್ಲ ವಿಮಾನ ನಿಲ್ದಾಣಗಳಿಗೂ ಆರೋಪಿಯ ಬಗ್ಗೆ ಮಾಹಿತಿ ಹೋಗುತ್ತದೆ. ಆ್ಯಂಬಸಿಗಳಿಗೂ ಮಾಹಿತಿ ನೀಡಲಾಗುತ್ತದೆ. ಪಾಸ್‌ಪೋರ್ಟ್‌ ನವೀಕರಿಸಲು, ವೀಸಾ ಪಡೆಯಲು, ವಿದೇಶಕ್ಕೆ ಪ್ರಯಾಣಿಸಲು ಆರೋಪಿಗಳು ಮುಂದಾದರೆ ರಾಯಭಾರ ಕಚೇರಿ, ವಿಮಾನ ನಿಲ್ದಾಣದ ಕಂಪ್ಯೂಟರ್‌ ದಾಖಲೆಗಳಲ್ಲಿ ಇವರ ಮಾಹಿತಿ ಬರುತ್ತದೆ. ನಂತರ ಇಂಟರ್‌ಪೋಲ್‌ ಅಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈ ಗೊಳ್ಳಲಾಗುತ್ತದೆ.

ಟಾಪ್ ನ್ಯೂಸ್

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.