Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Team Udayavani, Nov 14, 2024, 10:59 AM IST
ಬೆಂಗಳೂರು: ನಾಯಂಡಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್)ಯಕಾನ್‌ಸ್ಟೇಬಲ್ ಸಿ.ಬಿ.ಮನು (27) ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅರಸೀಕೆರೆಯ ಮನು ನಗರದ ಸಿಎಆರ್ ನಲ್ಲಿ ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು. ಗೌರಿ ಪಾಳ್ಯದಲ್ಲಿ ವಾಸವಾಗಿದ್ದ ಅವರು, ಮಂಗಳವಾರ ರಾತ್ರಿ 8.20ರ ಸುಮಾರಿಗೆ ಸ್ನೇಹಿತರ ಮನೆಗೆ ತೆರಳಿ ನಾಗಬಾವಿಯಿಂದ ನಾಯಂಡಹಳ್ಳಿ ಕಡೆ ಹೋಗುವಾಗ ಅಪಘಾತವಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ನಾಗರಬಾವಿಯಿಂದ ನಾಯಂಡಹಳ್ಳಿ ಮಾರ್ಗವಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ಮನು, ರಸ್ತೆಯ ಬದಿಯಲ್ಲಿ ಬಿದ್ದಿದ್ದ ಮರಳಿನಿಂದ ನಿಯಂತ್ರಣ ತಪ್ಪಿ, ಪಾದಚಾರಿ ರಸ್ತೆಗೆ ಡಿಕ್ಕಿಯಾಗಿದೆ. ನಂತರ ಇದೇ ರಸ್ತೆಯಲ್ಲಿ ಮುಂದೆ ಹೋಗುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದೆ. ಆಗ ಕೆಳಗೆ ಬಿದ್ದ ಮನು ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿದ್ದೆ. ಕೂಡಲೇ ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮನು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
2019ರಲ್ಲಿ ಪೊಲೀಸ್ ಇಲಾಖೆಗೆ ಮನು ಸೇರಿದ್ದರು. ಮನು ಸೋಮವಾರವಷ್ಟೇ ಜನ್ಮದಿನ ಆಚರಿಸಿಕೊಂಡಿದ್ದರು ಎಂದು ಅವರ ಸಹೊದ್ಯೋಗಿಗಳು ತಿಳಿಸಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.