ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ
Team Udayavani, Apr 29, 2021, 6:24 PM IST
ಬೆಂಗಳೂರು : ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಾರದಲ್ಲಿ ಕನಿಷ್ಠ ಒಂದು ದಿನ ಸಭೆ ನಡೆಸುವಂತೆ ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಸೂಚಿಸಿ ಆದೇಶಿಸಿದ್ದಾರೆ.
ಕೋವಿಡ್ -19ರ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ಹೇರಿದ್ದು, ಈ ಸಂದರ್ಭದಲ್ಲಿ ರಾಜ್ಯದ ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಅಗ್ರಿವಾರ್ ರೂಮ್ ಅನ್ನು ಸೇತುವಂತೆ ಕಾರ್ಯನಿರ್ವಹಿಸಲು ಆರಂಭಿಸಲಾಗಿದೆ. ಸರ್ಕಾರದ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ( outside Containment Zone ) ವಿನಾಯಿತಿ ನೀಡಲಾಗಿದೆ . ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳ ಚಟುವಟಿಕೆಗಳು , ಸಂಬಂಧಿತ ಮಳಿಗೆಗಳು ಮತ್ತು ಗೋದಾಮುಗಳು ಸೇರಿದಂತೆ ಬಾಡಿಗೆ ಆದರಿತ ಸೇವಾ ಕೇಂದ್ರಗಳು , ಯಂತ್ರೋಪಕರಣಗಳಿಗೆ ವಿನಾಯಿತಿ ನೀಡಲಾಗಿದೆ . ಕೃಷಿ ಸಂಬಂಧಿತ ಚಟುವಟಿಕೆಗಳು , ಮೀನುಗಾರಿಕೆ , ಕುಕ್ಕುಟ , ಜಾನುವಾರು ಹಾಗೂ ಹೈನುಗಾರಿಕೆ ಇತ್ಯಾದಿಗಳಿಗೆ ವಿನಾಯಿತಿ ನೀಡಲಾಗಿದೆ .
ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ , ಜಿಲ್ಲೆಗಳಲ್ಲಿ ರೈತರು ಈ ಸಂಕಷ್ಟದ ಸಮಯದಲ್ಲಿ ಎದುರಿಸಬಹುದಾದ ಗೊಂದಲ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಲಹೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರುಗಳು ಹಾಗೂ ತಾಲ್ಲೂಕು ಮಟ್ಟದಲ್ಲಿ ವಾರದಲ್ಲಿ ಒಂದು ದಿನ ಸಭೆ ಆಯೋಜಿಸಿ , ರೈತರು ಕೋವಿಡ್ -19 ನಿಂದ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಕೇಳಬಹುದಾದ ಪ್ರಶ್ನೆಗಳಿಗೆ ಸೂಕ್ತ ಸಲಹೆ, ಪರಿಹಾರ ಮಾರ್ಗದರ್ಶನ ನೀಡಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಯಾವುದಾದರು ಪ್ರಶ್ನೆಗಳಿಗೆ ಮಾಹಿತಿ ನೀಡಲು ಸಾಧ್ಯವಾಗದಿದ್ದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು,ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಸೂಪರಿಟೆಂಡೆಂಟ್ ಆಫ್ ಪೊಲೀಸ್‌ರವರ ಗಮನಕ್ಕೆ ತಂದು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.ಅಲ್ಲದೇ ಸಭೆ ಆಯೋಜಿಸುವಾಗ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೋವಿಡ್ -19 ರ ಪ್ರಸರಣವನ್ನು ನಿಯಂತ್ರಿಸಲು ನಿಗಧಿಪಡಿಸಿರುವ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಹಾಗೂ ಇನ್ನಿತರೆ ಕೋವಿಡ್ -19 ರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೃಷಿ ನಿರ್ದೇಶಕರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.