ಪತಿ ಬೈದಿದ್ದಕ್ಕೆ ಮಹಿಳೆ ಆತ್ಮಹತ್ಯೆ
Team Udayavani, Sep 22, 2018, 1:12 PM IST
ಬೆಂಗಳೂರು: ರುಚಿಯಾಗಿ ಅಡುಗೆ ಮಾಡಿಲ್ಲ ಎಂದು ಬೇಸರಗೊಂಡ ಪತಿ ಬೈದಿದ್ದಕ್ಕೆ ನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವರ ಜೀವನಹಳ್ಳಿಯ ಶಾಂಪುರದಲ್ಲಿ ನಡೆದಿದೆ. ಜಯಲಕ್ಷ್ಮಿ (31) ಮೃತ ಮಹಿಳೆ. ಪ್ರಕರಣ ಸಂಬಂಧ ಆಕೆಯ ಪತಿ ನಾಗರಾಜ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಂಪುರದ ಬಾಡಿಗೆ ಮನೆಯಲ್ಲಿ ದಂಪತಿ ವಾಸ ಮಾಡುತ್ತಿದ್ದು, ದಂಪತಿಗೆ 7 ಮತ್ತು 5 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ.
ಗುರುವಾರ ಎಂದಿನಂತೆ ನಾಗರಾಜ್ ಸಲೂನ್ ಶಾಪ್ ಕೆಲಸಕ್ಕೆ ಹೋಗಿದ್ದು, ಸಂಜೆ 6 ಗಂಟೆ ಸುಮಾರಿಗೆ ನಾಗರಾಜ್ ತಾಯಿ ಸ್ನಾನಕ್ಕೆ ಹೋಗಿದ್ದಾರೆ. ಈ ಸಂಧರ್ಭದಲ್ಲಿ ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಿದ ಜಯಲಕ್ಷ್ಮಿ, ಕೊಠಡಿಗೆ ತೆರಳಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೀರಾಟದ ಶಬ್ದ ಕೇಳಿ ಅತ್ತೆ ಹಾಗೂ ಮಕ್ಕಳು ಓಡಿಬಂದಿದ್ದು, ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ, ಸುಟ್ಟಗಾಯಗಳಿಂದ ಜಯಲಕ್ಷ$Yಮಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿ ನಡುವೆ ಕ್ಷುಲ್ಲಕ ವಿಚಾರಗಳಿಗೆ ಆಗಾಗ ಜಗಳ ನಡೆಯುತ್ತಿತ್ತು. ನಾಗರಾಜ್ ಅವರ ತಾಯಿ ನಿತ್ಯ ಮನೆಯಲ್ಲಿ ಅಡುಗೆ ತಯಾರಿಸುತ್ತಿದ್ದರು. ಆದರೆ ಬುಧವಾರ ರಾತ್ರಿ ಜಯಲಕ್ಷ್ಮಿ ಅವರು ಅಡುಗೆ ಮಾಡಿದ್ದು, ಊಟ ಮಾಡುವಾಗ ಪತಿ ನಾಗರಾಜ್, ರುಚಿಯಾಗಿ ಅಡುಗೆ ಮಾಡಿಲ್ಲ ಎಂದು ಬೈದಿದ್ದರಿಂದ ಜಗಳ ನಡೆದಿತ್ತು ಎಂದು ತಿಳಿದು ಬಂದಿದೆ. ಮೃತ ಜಯಲಕ್ಷ್ಮಿ ಪೋಷಕರು ನೀಡಿದ ದೂರಿನ ಮೇರೆಗೆ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ದೈಹಿಕ ಕಿರುಕುಳ ಆರೋಪದ ಮೇರೆಗೆ ನಾಗರಾಜ್ನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.