ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಮಹಿಳಾ ಇನ್ಸ್ಪೆಕ್ಟರ್
Team Udayavani, Apr 21, 2022, 10:43 AM IST
ಬೆಂಗಳೂರು: ನೆಲದಡಿಯಲ್ಲಿ ಅನಿಲ ಕೊಳವೆ ಅಳವಡಿಸುವ ಗುತ್ತಿಗೆ ಕಾಮಗಾರಿ ಮುಂದುವರಿಸಲು ಗುತ್ತಿಗೆದಾರರೊಬ್ಬರಿಂದ 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಚಿಕ್ಕಜಾಲ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯ ಹಂಸವೇಣಿ ಬಂಧಿತರು. ರಾಮಪುರ ನಿವಾಸಿಯೊಬ್ಬರು ಗ್ಯಾಸ್ಲೇನ್ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರಾಗಿದ್ದು, ಗೇಲ್ ಕಂಪನಿ ವತಿಯಿಂದ ಮಾಸ್ ಕನ್ಸ್ಟ್ರಕ್ಷನ್ನವರಿಗೆ ಬೆಂಗಳೂರು ನಗರದ ಸಾಕಷ್ಟು ಕಡೆ ನೆಲದ ಅಡಿಯಲ್ಲಿ ಪೈಪ್ ಅಳವಡಿಸಿ ಗ್ಯಾಸ್ ಸಂಪರ್ಕ ನೀಡುವ ಗುತ್ತಿಗೆಯನ್ನು ಇವರು ಪಡೆದಿದ್ದರು. ಅದೇ ರೀತಿ ಜಕ್ಕೂರು ವಾರ್ಡ ನಂ-5ರ ಟೆಲಿಕಾಂ ಬಡಾವಣೆಯಲ್ಲಿ ನೆಲದಡಿಯಲ್ಲಿ ಪೈಪ್ ಅಳವಡಿಸುವ ಉಪಗುತ್ತಿಗೆ ನೀಡಲಾಗಿತ್ತು. ಟೆಲಿಕಾಂ ಬಡಾವಣೆಯ 8ನೇ ಕ್ರಾಸ್ನಲ್ಲಿ ಕಾಮಗಾರಿ ಪ್ರಾರಂಭಿಸಿದಾಗ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹಂಸವೇಣಿ ಕೆಲಸ ನಿಲ್ಲಿಸಲು ಸೂಚಿಸಿದ್ದರು. ಕಾಮಗಾರಿಯ ದಾಖಲಾತಿಗಳನ್ನು ಠಾಣೆಗೆ ತೆಗೆದುಕೊಂಡು ಬರುವಂತೆ ತಿಳಿಸಿದ್ದರು.
ಗುತ್ತಿಗೆದಾರರು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಚಿಕ್ಕಜಾಲ ಟ್ರಾಫಿಕ್ ಪೊಲೀಸ್ ಠಾಣೆಗೆ ಹೋಗಿ ದಾಖಲಾತಿ ತೋರಿಸಿದ್ದರು. ಆ ವೇಳೆ ಅದೇ ಠಾಣೆಯ ಸಿಬ್ಬಂದಿ ಗಂಗರಾಜು ಹಾಗೂ ಅಮುಲ್ ಎಂಬುವವರು “ಕಾಮಗಾರಿ ಮುಂದುವರಿಸಲು 20 ಸಾವಿರ ರೂ. ಲಂಚ ಕೊಡಬೇಕು’ ಎಂದು ಸೂಚಿಸಿದ್ದರು. ಹೆಚ್ಚುವರಿ ಕಾಮಗಾರಿ ನಿರ್ವಹಿಸಲು ಒಟ್ಟು 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲಂಚ ಕೊಡಲು ಇಚ್ಛಿಸದ ಗುತ್ತಿಗೆದಾರರು ಎಸಿಬಿಗೆ ಈ ಕುರಿತು ದೂರು ನೀಡಿದ್ದರು.
ಬುಧವಾರ ಬೆಳಗ್ಗೆ (ಏ.20) ಹಂಸವೇಣಿ ಗುತ್ತಿಗೆದಾರರಿಂದ 20 ಸಾವಿರ ರೂ. ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ಚಿಕ್ಕಜಾಲ ಠಾಣೆಯ ಮೇಲೆ ದಾಳಿ ನಡೆಸಿ ಹಂಸವೇಣಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.