Bengaluru: ಪ್ರೇಮ ವೈಫಲ್ಯ; ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ
Team Udayavani, Aug 14, 2024, 10:54 AM IST
ಬೆಂಗಳೂರು: ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಲಿಖೀತಾ ಗಾಜ್ಮಿàರ್ (25) ಮೃತ ಯುವತಿ ಎಂದು ಗುರುತಿಸಲಾಗಿದೆ. 10 ದಿನಗಳ ಹಿಂದಷ್ಟೇ ತನ್ನ ಸಹೋದರಿ ಮನೆಗೆ ಬಂದಿದ್ದ ಯುವತಿ ಮಂಗಳವಾರ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.
ಬಿಎ ಪದವೀಧರಳಾಗಿರುವ ಲಿಖಿತಾ ಡಾರ್ಜಿ ಲಿಂಗ್‌ನಲ್ಲಿ ಬಿಹಾರ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಇಬ್ಬರ ಪ್ರೇಮ ಚೆನ್ನಾಗಿಯೇ ಇತ್ತು. ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗಾಗಿ ಲವ್ ಬ್ರೇಕ್ ಅಪ್ ಆಗಿತ್ತು. ಅದರಿಂದ ಲಿಖೀತಾ ಮನನೊಂದಿದ್ದಳು. ಸಾಯುವ ಮಾತಗಳನ್ನಾಡುತ್ತಿದ್ದಳು. ಆದರಿಂದ ಬೆಂಗಳೂರಿನ ಸೋಲ ದೇವನಹಳ್ಳಿಯಲ್ಲಿದ್ದ ಸಹೋದರಿ, ಆ.3ರಂದು ತನ್ನ ಮನೆಗೆ ಕರೆದುಕೊಂಡು ಬಂದಿದ್ದರು.
ಆದರೆ, ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಮನೆಯಿಂದ ಹೊರಗಡೆ ಬಂದ ಲಿಖೀತಾ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.