ಅನಧಿಕೃತ ಆಟೋಚಾಲನೆ ಕಡಿವಾಣಕ್ಕೆ ಆಧಾರ್-ಇ ಪರ್ಮಿಟ್
Team Udayavani, Feb 14, 2018, 11:31 AM IST
ಬೆಂಗಳೂರು: ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಮೂಲಕ ಆಟೋ ಚಾಲಕರಿಗೆ ಇ- ಪರ್ಮಿಟ್ ವಿಸ್ತರಿಸುವ ಯೋಜನೆ ಜಾರಿಗೊಳಿ ಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.
ಒಂದೇ ಪರ್ಮಿಟ್ ನಂಬರ್ ಇಟ್ಟುಕೊಂಡು ಹಲವು ಆಟೋಗಳ ಸಂಚಾರಕ್ಕೆ ಕಡಿವಾಣ ಹಾಕುವ ಸಲುವಾಗಿ ಸಾರಿಗೆ ಇಲಾಖೆ “ಆಧಾರ್ ಇ-ಪರ್ಮಿಟ್’ ವ್ಯವಸ್ಥೆ ಯೋಜನೆ ಜಾರಿಗೆ ಮುಂದಾಗಿದೆ. ಈಗಾಗಲೇ ಆಧಾರ್ ಇ-ಪರ್ಮಿಟ್ ನೀಡುವ ಪ್ರಾಯೋಗಿಕ ಪರೀಕ್ಷೆ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಯಶಸ್ವಿಯಾಗಿದ್ದು, ಇದೀಗ ನಗರಾದ್ಯಂತ ವಿಸ್ತರಿಸುವ ಸಲುವಾಗಿ ರಾಜಧಾನಿಯಲ್ಲಿ ಸಂಚರಿಸುವ ಆಟೋರಿಕ್ಷಾಗಳ ಪರವಾನಿಗೆಯನ್ನು ಭದ್ರತಾ ಅಂಶಗಳನ್ನೊಳಗೊಂಡ ಇ-ಪರ್ಮಿಟ್ ವ್ಯವಸ್ಥೆ ಜಾರಿಗೊಳಿಸಲು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವ ಸಾಫ್ಟ್ ವೇರ್ ಸಿದ್ಧಪಡಿಸಲು, ಎನ್ಐಸಿ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ನಗರದಲ್ಲಿ ಒಟ್ಟು 1.56,758 ಆಟೋರಿಕ್ಷಾಗಳು ಸಾರಿಗೆ ಇಲಾಖೆಯಲ್ಲಿ ನೋಂದಣಿಯಾಗಿವೆ. ಅಲ್ಲದೆ ಆಟೋರಿಕ್ಷಾಗಳ ಅನಧಿಕೃತ ಓಡಾಟಕ್ಕೆ ಕಡಿವಾಣ ಹಾಕುವ ಸಲುವಾಗಿ ರೂಪಿಸಲಾಗುತ್ತಿರುವ ಆಧಾರ್ ಇಪರ್ಮಿಟ್ ಸಹಕಾರಿಯಾಗಲಿದೆ ಎಂದು ವಿಧಾನಪರಿಷತ್ನಲ್ಲಿ ಸಾರಿಗೆ ಸಚಿವ ಎಚ್. ಎಂ ರೇವಣ್ಣ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.