ಆಧಾರ್‌ ಮಾಹಿತಿ ಸೋರಿಕೆ ಆರೋಪ ಅರ್ಜಿ ಸುಪ್ರೀಂಗೆ

ಕಾನೂನಾತ್ಮಕ ಅಂಶಗಳ ಬಗ್ಗೆ ಅರ್ಜಿದಾರರು ಈ ಹಿಂದೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Team Udayavani, Oct 21, 2022, 5:48 PM IST

ಆಧಾರ್‌ ಮಾಹಿತಿ ಸೋರಿಕೆ ಆರೋಪ ಅರ್ಜಿ ಸುಪ್ರೀಂಗೆ

ಬೆಂಗಳೂರು: ಆಧಾರ್‌ ಬಯೋಮೆಟ್ರಿಕ್‌ ಮತ್ತು ಆಧಾರ್‌ ವ್ಯವಸ್ಥೆಯಿಂದ ಸಂಗ್ರಹಣೆ ಮಾಡಲಾಗಿರುವ ದತ್ತಾಂಶದ ನಿರ್ವಹಣೆ ಗುತ್ತಿಗೆಯನ್ನು ಅಮೆರಿಕ ಸೇರಿದಂತೆ 4 ವಿದೇಶಿ ಕಂಪನಿಗಳಿಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಕ್ರಮ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪರಿಹಾರ ಪಡೆದುಕೊಳ್ಳುವಂತೆ ಹೈಕೋರ್ಟ್‌ ಸೂಚಿಸಿದೆ.

ಈ ಕುರಿತು ನಗರದ ಥಣಿಸಂದ್ರ ನಿವಾಸಿ ಮ್ಯಾಥ್ಯೂ ಥಾಮಸ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ವಾದ ಮಂಡಿಸಿ, ಆಧಾರ್‌ ಬಯೋಮೆಟ್ರಿಕ್‌ ಮತ್ತು ಆಧಾರ್‌ ಮೂಲಕ ಸಂಗ್ರಹಿಸಿದ ದತ್ತಾಂಶದ ನಿರ್ವಹಣೆ ಕಾರ್ಯದ ಗುತ್ತಿಗೆಯನ್ನು ನಾಲ್ಕು ವಿದೇಶಿ ಕಂಪನಿಗಳಿಗೆ ನೀಡಲಾಗಿದೆ. ಗುತ್ತಿಗೆ ಪಡೆದಿರುವ ಅಮೆರಿಕದ ಕಂಪನಿಯು ಅಲ್ಲಿನ ಎಫ್ಬಿಐ ಮತ್ತು ಕೇಂದ್ರ ಗುಪ್ತಚರ ಏಜೆನ್ಸಿಯೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗಾಗಿ, ಆಧಾರ್‌ ದತ್ತಾಂಶ ಈ ಎಲ್ಲಾ ಕಂಪನಿಗಳಿಗೆ ಸುಲಭವಾಗಿ ಲಭ್ಯವಾಗುತ್ತದೆ ಎಂದು ತಿಳಿಸಿದರು. ಅರ್ಜಿಯಲ್ಲಿ ಎತ್ತಲಾಗಿರುವ ಅಂಶಗಳ ಕುರಿತು ಸುಪ್ರಿಂಕೋರ್ಟ್‌ ಮುಂದೆ ಪರಿಹಾರ ಪಡೆಯುವುದೇ ಸೂಕ್ತ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಅದಕ್ಕೆ ಅರ್ಜಿದಾರರ ಪರ ವಕೀಲರು ಪ್ರತಿಕ್ರಿಯಿಸಿ, ಆಧಾರ್‌ ಕಾರ್ಡ್‌ ಪಡೆಯಲು ಜನ ತಮ್ಮ ಖಾಸಗಿ ಮಾಹಿತಿ ನೀಡಬೇಕಿರುವ ಹಿನ್ನೆಲೆ ಯಲ್ಲಿ ಆ ಕುರಿತ ಕಾನೂನಾತ್ಮಕ ಅಂಶಗಳ ಬಗ್ಗೆ ಅರ್ಜಿದಾರರು ಈ ಹಿಂದೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್‌ ಸಹ ಆಧಾರ್‌ ಕಾರ್ಡ್‌ಗಾಗಿ ಜನ ನೀಡುವುದು ಖಾಸಗಿ ಮಾಹಿತಿಯಾಗಿದ್ದು, ಗೌ ಪ್ಯ ತೆಗೆ ಸಂಬಂಧಿಸಿ ರುವುದಾಗಿ ಹೇಳಿದೆ. ತದ ನಂತರ ಬೆಳವಣಿಗೆಗಳ ಬಗ್ಗೆ ಈ ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ನಡೆಸುವ ಅಧಿಕಾರ ವ್ಯಾಪ್ತಿ ಹೈಕೋರ್ಟ್‌ ಹೊಂದಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಈ ಹಿಂದೆ ಅರ್ಜಿದಾರರು ಸಲ್ಲಿಸಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್‌ ಸುದೀರ್ಘ‌ವಾದ ಆದೇಶ ಹೊರಡಿಸಿದೆ. ಹಾಗಾಗಿ, ಈ ವಿಚಾರದ ಕುರಿತು ಸುಪ್ರಿಂಕೋರ್ಟ್‌ ವಿಚಾರಣೆ ನಡೆಸುವುದೇ ಸೂಕ್ತ. ಅರ್ಜಿದಾರರ ಈ ಮನವಿಗಳ ಬಗ್ಗೆ ಸುಪ್ರಿಂಕೋರ್ಟ್‌ ಗಮನ ಹರಿಸಿ, ಹಿಂದೆ ಹೊರಡಿಸಿದ ಆದೇಶವನ್ನು ಮಾರ್ಪಡಿಸಬಹುದು. ಇಲ್ಲವೇ ಹಿಂಪಡೆದುಕೊಂಡು ಹೊಸದಾಗಿ ಆದೇಶ ಮಾಡುವ ಸಾಧ್ಯತೆ ಇರಬಹುದು ಎಂದು ನ್ಯಾಯಪೀಠ ಹೇಳಿತು.ಅದಕ್ಕೆ ಒಪ್ಪಿದ ಅರ್ಜಿದಾರರು, ಅರ್ಜಿ ಹಿಂಪಡೆದು ಸುಪ್ರೀಂಕೋರ್ಟ್‌ ಮುಂದೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಅರ್ಜಿದಾರರ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ಹಿಂಪಡೆಯಲು ಅರ್ಜಿದಾರರಿಗೆ ಅನುಮತಿ ನೀಡಿತು. ಜೊತೆಗೆ, ಅರ್ಜಿಯಲ್ಲಿ ಎತ್ತಲಾಗಿರುವ ಎಲ್ಲಾ ಅಂಶಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.