ಕರೀಂಲಾಲ್ ತೆಲಗಿ ಸಾವು
Team Udayavani, Oct 27, 2017, 6:00 AM IST
ಬೆಂಗಳೂರು: ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಕರೀಂಲಾಲ್ (56) ತೆಲಗಿ ಗುರುವಾರ ಮೃತಪಟ್ಟಿದ್ದಾನೆ.
ಅಧಿಕ ರಕ್ತದೊತ್ತಡ, ಮೆದುಳು ಜ್ವರ ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತೆಲಗಿ, ಕಳೆದ 13 ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಆದರೆ, ಕಳೆದ ಮೂರುದಿನಗಳಿಂದ ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ನೀಡುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯಾಹ್ನ 3:55ರ ಸುಮಾರಿಗೆ ಅಸುನೀಗಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಚಿಕಿತ್ಸೆ ಫಲಿಸದೇ ತೆಲಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ನಾಳೆ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಆ ಬಳಿಕ ಆತನ ಪತ್ನಿ, ಮಗಳು ಸನಾ ಸೇರಿದಂತೆ ಸಂಬಂಧಿಕರ ವಶಕ್ಕೆ ಮೃತದೇಹವನ್ನು ವೈದ್ಯರು ಒಪ್ಪಿಸಲಿದ್ದಾರೆ. ಶುಕ್ರವಾರ ಮೃತದೇಹ ಹಸ್ತಾಂತರವಾಗುವ ಸಾಧ್ಯತೆಯಿದ್ದು, ಬೆಳಗಾವಿಯ ಖಾನಾಪುರದಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತೆಲಗಿ ಕುಟುಂಬ ಮೂಲಗಳು ತಿಳಿಸಿವೆ.
ದೇಶವನ್ನೇ ಬೆಚ್ಚಿಬೀಳಿಸಿದ್ದ ಬಹುಕೋಟಿ ಛಾಪಾ ಕಾಗದ ಹಗರಣದಲ್ಲಿ ಬಂಧಿತನಾಗಿ 2001ರ ನವೆಂಬರ್‌ನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ತೆಲಗಿ ಹಲವು ಖಾಯಿಲೆಗಳಿಂದ ಬಳಲುತ್ತಿದ್ದ. ನ್ಯಾಯಾಲಯದ ಅನುಮತಿ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಗಾಗ್ಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಯಮಗಳನ್ನು ಉಲ್ಲಂ ಸಿ ವಿಐಪಿ ಆತಿಥ್ಯವನ್ನು ತೆಲಗಿಗೆ ನೀಡಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿತ್ತು.
ರಾಜಕೀಯ ನಾಯಕರು ಹಾಗೂ ಭೂಗತ ಲೋಕದ ನೆರಳಿನಲ್ಲಿಯೇ ನಕಲಿ ಛಾಪಾಕಾಗದ ದಂಧೆ ನಡೆಸಿದ್ದ ಕರೀಂಲಾಲ್ ತೆಲಗಿ ವಿರುದ್ಧ ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ ದಾಖಲಾಗಿದ್ದ 6 ವಂಚನೆ ಪ್ರಕರಣಗಳಲ್ಲಿ ಅಧೀನ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.
ಇತ್ತೀಚಿಗೆ ಈ ಪ್ರಕರಣಗಳ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ 4 ಪ್ರಕರಣಗಳಲ್ಲಿ ಖುಲಾಸೆಗೊಳಿಸಿ, 2 ಪ್ರಕರಣಗಳಲ್ಲಿ ಪ್ರತ್ಯೇಕವಾಗಿ 7 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿತ್ತು. ಹೊರ ರಾಜ್ಯಗಳಲ್ಲಿ ಸುಮಾರು 28 ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
MUST WATCH
ಹೊಸ ಸೇರ್ಪಡೆ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.