ಇವಿಎಂ ಬಗ್ಗೆ ಹಾದಿ – ಬೀದಿ ಚರ್ಚೆ ಬೇಡ


Team Udayavani, Mar 30, 2019, 2:26 PM IST

evm-bagge

ಬೆಂಗಳೂರು: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಗ್ಗೆ ರಾಜಕೀಯ ಪಕ್ಷಗಳು ಅಥವಾ ಜನಸಾಮಾನ್ಯರು ಸುಖಾಸುಮ್ಮನೆ ಆರೋಪ ಮಾಡುವುದು ಮತ್ತು ಇದರ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ತೀಕ್ಷ್ಣವಾಗಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇವಿಎಂ-ವಿವಿಪ್ಯಾಟ್‌ಗಳ ತಾಂತ್ರಿಕ ವಿಷಯಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು. ಇವಿಎಂನ ತಾಂತ್ರಿಕ ಹಾಗೂ ಆಡಳಿತಾತ್ಮಕ ವಿಷಯಗಳನ್ನು ಬಲವಾಗಿ ಸಮರ್ಥಿಸಿಕೊಂಡರು.

ನಮ್ಮ ದೇಶದಲ್ಲಿ ಬಳಕೆ ಆಗುತ್ತಿರುವ ಇವಿಎಂಗಳು ಇಡೀ ಪ್ರಪಂಚದಲ್ಲೇ ಅತ್ಯಂತ ಸುಧಾರಿತ ಮತ್ತು ತಾಂತ್ರಿಕವಾಗಿ ಸುರಕ್ಷಿತ ಇವಿಎಂಗಳಾಗಿವೆ. ಇವುಗಳನ್ನು ಹ್ಯಾಕ್‌ ಮಾಡಲು, ತಿರುಚಲು, ದುರ್ಬಳಕೆ ಮಾಡಿಕೊಳ್ಳಲು ಯಾವ ಕಾರಣಕ್ಕೂ, ಯಾವ ಹಂತದಲ್ಲೂ ಸಾಧ್ಯವಿಲ್ಲ.

ಇವುಗಳ ಬಗೆಗಿನ ಎಲ್ಲ ಆರೋಪ, ಆಕ್ಷೇಪ ಮತ್ತು ಆಪಸ್ವರಗಳಿಗೆ ತಾಂತ್ರಿಕ ಉತ್ತರಗಳು ಸಿಕ್ಕಿವೆ. ಮೇಲಾಗಿ ಇದಕ್ಕೆ ನ್ಯಾಯಾಲಯದ ಸಮರ್ಥನೆ ಸಿಕ್ಕಿದೆ. ಇವಿಎಂ ಬಗ್ಗೆ ರಾಜಕೀಯ ಪಕ್ಷಗಳಿಂದ ಹಾಗೂ ಜನಸಾಮಾನ್ಯರಿಂದ ಸಾಕಷ್ಟು ದೂರುಗಳು ಬಂದಿವೆ, ಅನುಮಾನಗಳನ್ನು ವ್ಯಕ್ತಪಡಿಸಲಾಗಿದೆ.

ಆದರೆ, ಅದೆಲ್ಲದರ ಬಗ್ಗೆ ತಾಂತ್ರಿಕ ತಜ್ಞರಿಂದ ಸಮಂಜಸವಾದ ಉತ್ತರ ಮತ್ತು ಸ್ಪಷ್ಟನೆಗಳನ್ನು ಕೊಡಲಾಗಿದೆ. ಇವಿಎಂ ಹ್ಯಾಕ್‌ ಬಗ್ಗೆ ಬಲವಾದ ಆರೋಪಗಳು ಕೇಳಿ ಬಂದಿದ್ದಾಗ ಕೇಂದ್ರ ಚುನಾವಣಾ ಆಯೋಗ “ಓಪನ್‌ ಹ್ಯಾಕಾಥಾನ್‌’ಗೆ ಕರೆ ಕೊಟ್ಟಿತ್ತು. ಆರೋಪ ಮಾಡಿದ್ದ ಯಾರೊಬ್ಬರೂ ಅಲ್ಲಿಗೆ ಬಂದಿಲ್ಲ. ಇವಿಎಂ ಬಗ್ಗೆ ಇಲ್ಲಿವರೆಗೆ ಮಾಡಲಾದ ಯಾವ ಆರೋಪವು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದರು.

5 ಕೋಟಿ ಮಂದಿಗೆ ಪ್ರಾತ್ಯಾಕ್ಷಿಕೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯಾದ್ಯಂತ 3.5 ಕೋಟಿ ಜನರಿಗೆ ಇವಿಎಂ ಬಗ್ಗೆ ಪ್ರಾತ್ಯಾಕ್ಷಿಕೆ ನೀಡಲಾಗಿತ್ತು. ಈ ಬಾರಿ ಇಲ್ಲಿವರೆಗೆ 3 ಕೋಟಿಗೂ ಹೆಚ್ಚು ಜನರಿಗೆ ಪ್ರಾತ್ಯಾಕ್ಷಿಕೆ ನೀಡಲಾಗಿದ್ದು, 5 ಕೋಟಿಗೂ ಹೆಚ್ಚು ಜನರಿಗೆ ಪ್ರಾತ್ಯಾಕ್ಷಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ. ವಿವಿಪ್ಯಾಟ್‌ ಬಳಕೆಯಿಂದ ಮತದಾನದ ಖಾತರಿ ಸಿಗಲಿದೆ.

ಒಬ್ಬ ಮತದಾರ ಮತ ಚಲಾಯಿಸಿದಾಗ ವಿವಿಪ್ಯಾಟ್‌ನ ಗಾಜಿನ ಕಿಂಡಿಯಲ್ಲಿ ಏಳು ಸೆಕೆಂಡ್‌ವರೆಗೆ ಮತದಾನದ ವಿವಿರ ಪ್ರದರ್ಶನಗೊಳ್ಳುತ್ತದೆ. ಇವಿಎಂ ಮತಯಂತ್ರಗಳ ಜಿಪಿಎಸ್‌ ವ್ಯವಸ್ಥೆ ಅಳವಡಿಸಿರುವ ವಾಹನಗಳಲ್ಲಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಸಾಗಿಸಲಾಗುತ್ತದೆ.

ರಾಜಕೀಯ ಪಕ್ಷದ ಪ್ರತಿನಿಧಿಗಳ ಬೆಂಗಾವಲಿಗೂ ಅವಕಾಶವಿರುತ್ತದೆ ಎಂದು ಸಂಜೀವ ಕುಮಾರ್‌ ವಿವರಿಸಿದರು. ಈ ವೇಳೆ ಉಪ ಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರು ಇವಿಎಂ-ವಿವಿಪ್ಯಾಟ್‌ ಬಗ್ಗೆ ಪ್ರಾತ್ಯಾಕ್ಷಿಕೆ ನೀಡಿದರು. ವಾರ್ತಾ ಇಲಾಖೆ ನಿರ್ದೇಶಕ ಬೃಂಗೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.