ಸದೃಢ ದೇಶ ನಿರ್ಮಾಣ ಎಬಿವಿಪಿ ಗುರಿ: ವಿನಯ್
Team Udayavani, Jul 10, 2017, 11:35 AM IST
ಬೆಂಗಳೂರು: ವಿದ್ಯಾರ್ಥಿ ಸಮೂಹದೊಂದಿಗೆ ಸೇರಿಕೊಂಡು ಸದೃಢ ಮತ್ತು ಸ್ವಾಭಿಮಾನಿ ಭಾರತ ನಿರ್ಮಾಣ ಮಾಡುವುದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗುರಿ ಎಂದು ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಹೇಳಿದ್ದಾರೆ.
ನಗರದ ಶೇಷಾದ್ರಿಪುರದ ಎಬಿವಿಪಿ ಪ್ರಾಂತ ಕಾರ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆಯಲ್ಲಿ ಎಬಿವಿಪಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ಸದೃಢ ಮತ್ತು ಸ್ವಾಭಿಮಾನಿ ದೇಶ ನಿರ್ಮಾಣದ ಸಂಕಲ್ಪಕ್ಕೆ ವಿದ್ಯಾರ್ಥಿಗಳು ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ದೇಶಾದ್ಯಂತ ಜು. 9ರಂದು ರಾಷ್ಟ್ರೀಯ ವಿದ್ಯಾರ್ಥಿ ದಿನ ಆಚರಿಸಲಾಗುತ್ತಿದೆ,’ ಎಂದು ಹೇಳಿದರು.
“ಎಬಿವಿಪಿ ಹುಟ್ಟಿ 69 ಸಂವತ್ಸರ ಸಂದಿದೆ. ಅಂದಿನಿಂದ ಇಂದಿನವರೆಗೂ ತನ್ನ ತತ್ವ-ಸಿದ್ಧಾಂತಗಳ ಆಧಾರದ ಮೇಲೆ ಸಾಗುತ್ತಿರುವ ಜಗತ್ತಿನ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆ ಇದಾಗಿದೆ. ದೇಶದ 30 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಬಿವಿಪಿ ಸದಸ್ಯರಾಗಿದ್ದಾರೆ. 7 ಸಾವಿರಕ್ಕೂ ಅಧಿಕ ಸ್ಥಾನಗಳಲ್ಲಿ ಸಂಘಟನೆಯು ಕಾರ್ಯ ನಿರ್ವಸುತ್ತಿದೆ. ಕಾಲೇಜು ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿಗಳ ಮಧ್ಯೆ ಕಾರ್ಯ ನಿರ್ವಸುತ್ತಿರುವ ಎಬಿವಿಪಿ, ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರದ ಜತೆಗೆ ಸಂಘಟನಾತ್ಮಕ ಹೋರಾಟ ವಿಧಾನದ ಮೂಲಕ ಅನೇಕ ಸುಧಾರಣೆ ತಂದಿದೆ,’ ಎಂದು ವಿವರಿಸಿದರು.
ವಿದ್ಯಾರ್ಥಿ ಪರಿಷತ್ತಿನ ಸೇವಾ ಚಟುವಟಿಕೆಗಳಲ್ಲಿ ಒಂದಾದ ಉಚಿತ ಬುಕ್ ಬ್ಯಾಂಕ್ನಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬುಕ್ ವಿತರಿಸಲಾಯಿತು. ಎಬಿವಿಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಕೆ.ಎನ್.ರಘುನಂದನ್, ಮಹಾನಗರ ಕಾರ್ಯದರ್ಶಿ ವೀಣಾ, ಬೆಂಗಳೂರು ಸಂಚಾಲಕ ಹರ್ಷ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.