ರಾಜಾಜಿನಗರ ಆರ್‌ಟಿಒ ಕಚೇರಿ ಮೇಲೆ ಎಸಿಬಿ ದಾಳಿ
Team Udayavani, Feb 28, 2019, 5:52 AM IST
ಬೆಂಗಳೂರು: ರಾಜಾಜಿನಗರದ ಆರ್‌ಟಿಒ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬುಧವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, 8.72 ಲಕ್ಷ ರೂ. ನಗದು ಸೇರಿ ಕೆಲ ಮಹತ್ವದ
ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ಬುಧವಾರ ಬೆಳಗ್ಗೆ ಬೆಂಗಳೂರು ನಗರ ಎಸಿಬಿ ವಿಭಾಗದ ಎಸ್ಪಿ ಡಾ. ಸಂಜೀವ್ ಎಂ. ಪಾಟೀಲ್ ನೇತೃತ್ವದ ಸುಮಾರು 40 ಅಧಿಕಾರಿಗಳ ತಂಡ, ಆರ್‌ಟಿಒ ಕಚೇರಿ ಮತ್ತು ಅದರ ಪಕ್ಕದಲ್ಲಿರುವ 14 ಅಂಗಡಿ, ಮಳಿಗೆಗಳನ್ನು ತಪಾಸಣೆ ನಡೆಸಿದೆ. ಈ ವೇಳೆ 8.72 ಲಕ್ಷ ರೂ. ನಗದು, ಮಳಿಗೆಗಳಲ್ಲಿದ್ದ ಎಂಟು ಆರ್‌ಟಿಒ ಕಚೇರಿಗಳ ಅಧಿಕೃತ ಮೊಹರುಗಳು, 1,026 ಆರ್‌ಸಿ ಸ್ಮಾರ್ಟ್ ಕಾರ್ಡ್, 1,523 ಚಾಲನಾ ಪರವಾನಗಿ ಸ್ಮಾರ್ಟ್ ಕಾರ್ಡ್, 19 ಎಫ್ಸಿ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದೆ. ಈ ಸಂಬಂಧ 17 ಮಧ್ಯವರ್ತಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಸಾರ್ವಜನಿಕರಿಂದ ಪಡೆಯುತ್ತಿದ್ದ ಲಂಚ, ಅಧಿಕಾರಿಗಳ ಪಾಲು ಎಷ್ಟು? ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಎಸಿಬಿ ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.