ಸಿಎಸ್ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು
Team Udayavani, Jun 13, 2018, 11:54 AM IST
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿವೃತ್ತ ನೌಕರ ಶಂಕರ ದೇವೇಗೌಡ ಎಂಬುವವರು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಮಂಗಳವಾರ ದೂರು ನೀಡಿದ್ದಾರೆ. ಉದ್ಯೋಗ ಮತ್ತು ತರಬೇತಿ ಇಲಾಖೆಯಲ್ಲಿ 62 ಜನರಿಗೆ ಹಿಂಬಡ್ತಿ ನೀಡಿ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಮತ್ತು ಹೈಕೋರ್ಟ್ ಅದೇಶಿಸಿತ್ತು.
ಆದರೆ, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಈ ತೀರ್ಪಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದು, ಹೈಕೋರ್ಟ್ ಆದೇಶ ಜಾರಿಗೊಳಿಸದಂತೆ ಇಲಾಖೆಯ ಅಧಿಕಾರಿಗಳಿಗೆ ಒತ್ತಡ ಹಾಕಿದ್ದಾರೆ ಎಂದು ಶಂಕರ ದೇವೇಗೌಡ ಆರೋಪಿಸಿದ್ದಾರೆ. ದೂರು ಸ್ವೀಕರಿಸಿದ ಅಧಿಕಾರಿಗಳು ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.