ರಾಜಕೀಯಕ್ಕೆ ಸಾಧಕರ ಪ್ರವೇಶ
Team Udayavani, Sep 22, 2017, 11:45 AM IST
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ರಾಜಕೀಯದತ್ತ ಆಕರ್ಶಿತರಾಗುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಪ್ರಿಸ್ಟೀನ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಎಂ.ಪ್ರಸನ್ನ ಸೇರಿದಂತೆ ವಿವಿಧ ಕ್ಷೇತ್ರಗಳ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.
ರಾಜಕೀಯ ಕ್ಷೇತ್ರದ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನ, ಬೇಸರ ಇತ್ತು. ಆದರೆ, ಇಂದು ರಾಷ್ಟ್ರಮಟ್ಟದಲ್ಲಿ ಉಂಟಾಗುತ್ತಿರುವ ರಾಜಕೀಯ ಪರಿವರ್ತನೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ವ್ಯಕ್ತಿಗಳನ್ನೂ ರಾಜಕೀಯದತ್ತ ಆಕರ್ಷಿಸುತ್ತಿದೆ. ಇದಕ್ಕೆ ಡಾ.ಪ್ರಸನ್ನ ಮತ್ತಿತರರ ಸೇರ್ಪಡೆ ಸಾಕ್ಷಿ. ಅದೇ ರೀತಿ ಹಿಂದುಳಿದ ವರ್ಗದ ಹಲವು ಮುಖಂಡರೂ ಬಿಜೆಪಿ ಸೇರುತ್ತಿರುವುದು ಆಶಾದಾಯಕ ಸಂಗತಿ ಎಂದರು.
ಇದೇ ವೇಳೆ ಡಾ.ಕುಮಾರ್, ಡಾ.ವಿ.ಬಾಲಚಂದ್ರ, ಡಾ.ರಾಮಕೃಷ್ಣ, ಎಂಜಿನಿಯರ್ ಹೇಮಂತ್‌ಕುಮಾರ್, ವಿ.ರೋಹಿತ್, ವಿಧುಪತಿ, ಮೋಹನ್, ವೀರೇಶ್ ಮತ್ತಿತರರು ಬಿಜೆಪಿ ಸೇರಿದರು. ಮಾಜಿ ಸಚಿವ ವಿ.ಸೋಮಣ್ಣ, ಮಾಜಿ ಸಂಸದ ಬಸವರಾಜು, ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥನಾರಾಯಣ, ಮುಖಂಡರಾದ ರಾಜೇಂದ್ರಕುಮಾರ್, ಶಿವರಾಮ್, ಎಂ.ನಾಗರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.