ಬಿಬಿಎಂಪಿ ಕಸದ ಲಾರಿಗೆ ಮತ್ತೂಂದು ಬಲಿ
Team Udayavani, Mar 31, 2022, 8:22 PM IST
ಬೆಂಗಳೂರು: ಬಿಬಿಎಂಸಿ ಕಸದ ಲಾರಿಗೆ ಮತ್ತೂಂದು ಜೀವ ಬಲಿಯಾಗಿದೆ. ಹತ್ತು ದಿನಗಳ ಹಿಂದಷ್ಟೇ ಹೆಬ್ಬಾಳದಲ್ಲಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಅಕ್ಷಯ ಮೇಲೆ ಕಸದ ಲಾರಿ ಹರಿದು ಆಕೆ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೂಂದು ದುರಂತ ಸಂಭವಿಸಿದೆ.
ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರ ಮೇಲೆ ಕಸದ ಲಾರಿ ಹರಿದು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಸಂಪಿಗೆಹಳ್ಳಿ ನಿವಾಸಿ ರಾಮಯ್ಯ(76) ಮೃತರು. ಕೃತ್ಯ ಎಸಗಿದ ಬಿಬಿಎಂಪಿ ಕಸದ ಲಾರಿ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ನಿರ್ಜನ ಪ್ರದೇಶದಲ್ಲಿ ಲಾರಿ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಶೋಧ ನಡೆಯುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ರಾಮಯ್ಯ, ಸಂಬಂಧಿ ಯುವತಿಯೊಬ್ಬರಿಗೆ ಗಂಡು ನೋಡಲು ಸಾತನೂರಿಗೆ ಕುಟುಂಬ ಸಮೇತ ಹೋಗಿದ್ದರು. ವಾಪಸ್ ತಮ್ಮ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿಕೊಂಡು ಒಬ್ಬರೇ ಬರುತ್ತಿದ್ದರು. ಅವರ ಪತ್ನಿ ಹಾಗೂ ಇತರೆ ಕುಟುಂಬ ಸದಸ್ಯರು ಬೇರೆ ಕಾರಿನಲ್ಲಿ ಬರುತ್ತಿದ್ದರು.
ಸಾತನೂರಿನಿಂದ ರೇವಾ ಜಂಕ್ಷನ್ ಮೂಲಕ ರೇವಾ ಕಾಲೇಜಿನ 2ನೇ ಗೇಟ್ ಮುಂಭಾಗ ಬರುವಾಗ, ಅತೀ ವೇಗ ಮತ್ತು ನಿರ್ಲಕ್ಷ್ಯತನಿಂದ ಚಾಲನೆ ಮಾಡಿಕೊಂಡು ಬಂದ ಬಿಬಿಎಂಸಿ ಕಸದ ಲಾರಿ ಚಾಲಕ ಹಿಂದಿನಿಂದ ರಾಮಯ್ಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ರಾಮಯ್ಯ ಕಾಲಿನ ಮೇಲೆ ಕಸದ ಲಾರಿ ಚಕ್ರಗಳು ಹರಿದು, ಕಾಲುಗಳು ತುಂಡಾಗಿದ್ದು, ತೀವ್ರ ರಕ್ತಸ್ರಾವದಿಂದ ಬಿದ್ದಿದ್ದರು. ಕೂಡಲೇ ಸ್ಥಳೀಯರು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ಹೇಳಿದರು. ಘಟನೆ ಸಂಬಂಧ ರಾಮಯ್ಯ ಪುತ್ರ ರಾಜಶೇಖರ್ (43) ಎಂಬವರು ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತ ಹೆಚ್ಚಳ:
ದುರ್ಘಟನೆ ಕುರಿತು ರಾಮಯ್ಯ ಸಂಬಂಧಿ ಶಿವಕುಮಾರ್ ಮಾತನಾಡಿ, ಸಂಬಂಧಿಕರ ಮನೆಗೆ ರಾಮಯ್ಯ ಹೋಗಿದ್ದು, ವಾಪಸ್ ಒಬ್ಬರೇ ದ್ವಿಚಕ್ರ ವಾಹನದಲ್ಲಿ ರಸ್ತೆ ಬದಿಯಲ್ಲೇ ನಿಧಾನವಾಗಿ ಬರುತ್ತಿದ್ದರು. ಈ ವೇಳೆ ಬಿಬಿಎಂಪಿ ಕಸದ ಲಾರಿ ಏಕಾಏಕಿ ರಾಮಯ್ಯಗೆ ಡಿಕ್ಕಿ ಹೊಡೆದರಿಂದ ಅವರು ಮೃತಪಟ್ಟಿದ್ದಾರೆ.
ರಾಮಯ್ಯ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದರು. ಅದೃಷ್ಟವಶಾತ್ ಅವರ ಪತ್ನಿ ಬೇರೆ ಕಾರಿನಲ್ಲಿ ಬರುತ್ತಿದ್ದರು. ಒಂದು ವೇಳೆ ಇಬ್ಬರು ಒಂದೇ ವಾಹನದಲ್ಲಿ ಬಂದಿದ್ದರೆ, ಇಬ್ಬರು ಮೃತಪಡುತ್ತಿದ್ದರು. ಇತ್ತೀಚೆಗೆ ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ರಾಮಯ್ಯ ಸಾವಿಗೆ ನ್ಯಾಯ ಕೊಡಬೇಕು. ಜತೆಗೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಾ.21ರಂದು ಶಾಲೆಗೆ ಮನೆಗೆ ತೆರಳುತ್ತಿದ್ದ 12 ವರ್ಷದ ಬಾಲಕಿ ಅಕ್ಷಯ ಬಿ.ನರಸಿಂಹಮೂರ್ತಿ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು. ಅಲ್ಲದೆ, ದುರ್ಘಟನೆಯಲ್ಲಿ ಪಾದಚಾರಿ ಸೌಮ್ಯ (28), ದ್ವಿಚಕ್ರ ವಾಹನ ಸವಾರ (42) ತೀವ್ರ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.