ಅಪಘಾತ: ಭಿಕ್ಷುಕರು ಸೇರಿ ನಾಲ್ವರು ಸಾವು
Team Udayavani, Jan 12, 2022, 10:24 AM IST
ಬೆಂಗಳೂರು: ನಗರದಲ್ಲಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭೀಕ್ಷುಕರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಮೂರು ಅಪಘಾತದಲ್ಲಿ ಮಹಿಳಾ ಭೀಕ್ಷುಕಿ ಸೇರಿ ಮೂವರು ಮೃತಪಟ್ಟಿದ್ದಾರೆ. ಏರ್‌ಪೋರ್ಟ್ ರಸ್ತೆಯಲ್ಲಿಯಲಹಂಕ ನಿವಾಸಿ ಎಂ.ಕೆ ಸಿಂಗ್ ಮಂಗಳವಾರ ಮಧ್ಯಾಹ್ನ 1.45ಕ್ಕೆ ತಮ್ಮ ಖಾಸಗಿ ಕಾರಿನಲ್ಲಿ ಬರುತ್ತಿದ್ದಾಗ ರಸ್ತೆ ದಾಟುತ್ತಿದ್ದ ಭಿಕ್ಷುಕನಿಗೆ ಡಿಕ್ಕಿ ಹೊಡೆದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುಮಾರು 36 ವರ್ಷದ ಭೀಕ್ಷುಕನ ಗುರುತು ಪತ್ತೆಯಾಗಿಲ್ಲ. ಪ್ರಕರಣದ ಸಂಬಂಧ ಎಂ.ಕೆ.ಸಿಂಗ್ ಅವರನ್ನು ಬಂಧಿಸಲಾಗಿದೆ. ಮತ್ತೂಂದು ಪ್ರಕರಣದಲ್ಲಿ ಅಪರಿಚಿತ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಭೀಕ್ಷುಕಿ(30) ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ 8.15 ರ ಸಮಯಲ್ಲಿಮಹಿಳೆ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಬರುತ್ತಿದ್ದರು ಈ ವೇಳೆ ದ್ವಿಚಕ್ರ ವಾಹನ ಸವಾರನೊಬ್ಬ ಗುದ್ದಿ ಪರಾರಿಯಾಗಿದ್ದಾನೆ. ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಮಹಿಳೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಪರಾರಿಯಾಗಿರುವ ವಾಹನ ಸವಾರನಿಗಾಗಿ ಶೋಧನಡೆಸಲಾಗುತ್ತಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಯುವಕ ದುರ್ಮರಣ: ದ್ವಿಚಕ್ರ ವಾಹನದಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಗೋಡೆಯೊಂದಕ್ಕೆ ಡಿಕ್ಕಿ ಹೊಡೆದುಕೊಂಡು ಯುವಕನೊಬ್ಬ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರುತಿನಗರ ನಿವಾಸಿ ಸಾಹಿಲ್ (20) ಮೃತ ಯುವಕ. ಪಾಲೆನಹಳ್ಳಿಯಲ್ಲಿ ಸಾಹಿಲ್ ತಂದೆವೆಲ್ಡಿಂಗ್ ಶಾಪ್ ತೆರೆದಿದ್ದು, ಸಂಜೆ ನಾಲ್ಕು ಗಂಟೆ ಸುಮಾರಿಗೆ ವೆಲ್ಡಿಂಗ್ ಶಾಪ್‌ಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ರಸ್ತೆ ಮಧ್ಯೆ ನಿಯಂತ್ರಣ ತಪ್ಪಿ ಅಂಗಡಿಯ ಗೋಡೆಯೊಂದಕ್ಕೆ ಹೊಡೆ ದುಕೊಂಡು, ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.