ಅಪಘಾತ: ಪಾದಚಾರಿ ಸೇರಿ ಇಬ್ಬರ ಸಾವು
Team Udayavani, Dec 15, 2018, 12:29 PM IST
ಬೆಂಗಳೂರು: ಪಲ್ಸರ್ ಬೈಕ್ನಲ್ಲಿ ವೇಗವಾಗಿ ಹೋಗುತ್ತಿದ್ದ ಯವಕನೊಬ್ಬ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಅಟ್ಟೂರು ಲೇಔಟ್ನ ಮೇಜರ್ ಉನ್ನಿಕೃಷ್ಣನ್ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಎಂ.ಎಸ್.ಪಾಳ್ಯ ನಿವಾಸಿ ಜೋಶ್ವಾ (29) ಮೃತ ಯುವಕ. ನಗರದಲ್ಲಿರುವ ಭಾರತೀಯ ವಾಯುಸೇನೆಯಲ್ಲಿ ಗುತ್ತಿಗೆ ನೌಕರನಾಗಿರುವ ಜೋಶ್ವಾ, ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಪಲ್ಸರ್ ಬೈಕ್ನಲ್ಲಿ ಮನೆಗೆ ವೇಗವಾಗಿ ಹೋಗುತ್ತಿದ್ದರು.
ಮಾರ್ಗಮಧ್ಯೆ ಮೇಜರ್ ಉನ್ನಿಕೃಷ್ಣನ್ ರಸ್ತೆಯಲ್ಲಿ ಏಕಾಏಕಿ ಬೈಕ್ನ “ಡಿಸ್ಕ್ ಬ್ರೇಕ್’ ಒತ್ತಿದ್ದಾರೆ. ಪರಿಣಾಮ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ/ ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ, ಮಾರ್ಗಮಧ್ಯೆಯೇ ಜೋಶ್ವಾ ಮೃತಪಟ್ಟಿದ್ದಾರೆ. ಅತೀಯಾದ ವೇಗ ಮತ್ತು ಹೆಲ್ಮೆಟ್ ಧರಿಸದಿರುವುದೇ ಘಟನೆ ಕಾರಣ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪಾದಚಾರಿ ಸಾವು: ಮತ್ತೂಂದು ಪ್ರಕರಣದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಂವಿಐಟಿ ಜಂಕ್ಷನ್ನಲ್ಲಿ ಗುರುವಾರ ರಾತ್ರಿ ನಡೆದಿದೆ.
ಸುಮಾರು 60 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ. ಕೃತ್ಯವೆಸಗಿದ ವಾಹನದ ಬಗ್ಗೆಯೂ ಮಾಹಿತಿಯಿಲ್ಲ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿರುವ ದೃಶ್ಯಗಳು ಕೂಡ ಅಸ್ಪಷ್ಟವಾಗಿವೆ. ಪ್ರಕರಣ ದಾಖಲಾಗಿದ್ದು, ಮೃತರ ವಾರಸುದಾರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.