ದೇಗುಲಗಳಲ್ಲಿ ತಾಳಿ, ಚಿನ್ನ ಕದಿಯುತ್ತಿದ್ದವ ಬಂಧನ
Team Udayavani, Sep 11, 2022, 12:34 PM IST
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಮಾಡಿಕೊಂಡಿದ್ದ ಸಾಲ ತೀರಿಸಲು ದೇವಸ್ಥಾನಗಳಿಗೆ ನುಗ್ಗಿ ದೇವಿಯ ಮೈಮೇಲಿದ್ದ ಚಿನ್ನದ ತಾಳಿ ಹಾಗೂ ಇತರೆ ಚಿನ್ನಾಭರಣ ಕಳವು ಮಾಡುತ್ತಿದ್ದ ಕಳ್ಳನನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕಲ್ಲೇಶ್(35) ಬಂಧಿತ. ಈತನಿಂದ 30 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕೃಷಿಕನಾಗಿರುವ ಆರೋಪಿ, ಕೋವಿಡ್ ಸಂದರ್ಭದಲ್ಲಿ ನಷ್ಟ ಹೊಂದಿ ಎರಡು ವರ್ಷಗಳಿಂದ ದೇವಾಲಯಗಳಿಗೆ ನುಗ್ಗಿ ತಾಳಿ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ. ಈ ಚಿನ್ನಾಭರಣ ಮಾರಾಟ ಮಾಡಿ ಸಾಲ ತೀರಿಸಿಕೊಂಡಿದ್ದಾನೆ. ಆದರೂ ಮತ್ತೆ ಅದೇ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದನು. ಇತ್ತೀಚೆಗೆ ಠಾಣೆ ವ್ಯಾಪ್ತಿಯ ಕನ್ನಿಕಾಪರಮೇಶ್ವರಿ ದೇವಾಲಯಕ್ಕೆ ನುಗ್ಗಿ ದೇವಿಯ ತಾಳಿ ಸರ ಕಳವು ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಗಮನಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಗಮನ ಬೇರೆಡೆ ಸೆಳೆದು ಕೃತ್ಯ: ಪೂಜೆ ಮಾಡಿಸುವ ಸೋಗಿನಲ್ಲಿ ಭಕ್ತರು ಕಡಿಮೆ ಸಂಖ್ಯೆಯಲ್ಲಿರುವ ದೇವಾಲಯಗಳಿಗೆ ಹೋಗುತ್ತಿದ್ದ ಆರೋಪಿ, ಪುರೋಹಿತರು ಆರತಿ ಕೊಟ್ಟು ಬೇರೆ ಕೆಲಸಕ್ಕೆ ಮುಂದಾಗುತ್ತಿದ್ದಂತೆ ಚಿನ್ನಾಭರಣ ಕಳವು ಮಾಡುತ್ತಿದ್ದ. ಈತನ ಬಂಧನಿಂದ ಶ್ರೀರಾಮಪುರ, ಮಾಗಡಿ ರಸ್ತೆ, ಪೀಣ್ಯ ಹಾಗೂ ಹನುಮಂತನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ, ಒಂದು ವರ್ಷದ ಹಿಂದೆ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಇದೇ ಮಾದರಿಯ ಕೃತ್ಯದಲ್ಲಿ ಬಂಧಿಸಿದ್ದರು ಎಂದು ಪೊಲೀಸರು ಹೇಳಿದರು.
ಶ್ರೀರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.