ಲೈಂಗಿಕ ತಜ್ಞೆ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ಅಶ್ಲೀಲ ಚಿತ್ರ ಕಳುಹಿಸಿ ಕಿರುಕುಳ;ಸೆರೆ
Team Udayavani, Oct 22, 2022, 11:45 AM IST
ಬೆಂಗಳೂರು: ಖ್ಯಾತ ಲೈಂಗಿಕ ತಜ್ಞೆ ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಗೆ ತೆರೆದು ಮಹಿಳೆಯರಿಗೆ ಅಶ್ಲೀಲ ಧ್ವನಿ ಸಂದೇಶ ಹಾಗೂ ಚಿತ್ರಗಳನ್ನು ಕಳುಹಿಸಿ ಕಿರುಕುಳ ಕೊಡುತ್ತಿದ್ದ ಆರೋಪಿಯನ್ನು ಉತ್ತರ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಕೆಂಚಿಕೊಪ್ಪದ ನಿವಾಸಿ ಜಗದೀಶ್ (32) ಬಂಧಿತ. ಈತ ನಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಜಪ್ತಿ ಮಾಡಲಾಗಿದೆ. ಲೈಂಗಿಕ ವಿಚಾರದಲ್ಲಿ ತೊಂದರೆ ಇರುವ ಮಹಿಳೆಯರಿಗೆ ತಿಳಿವಳಿಕೆ ನೀಡುವ ಸಲುವಾಗಿ ತಮ್ಮ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು ಅದರಮೂಲಕ ಲೈಂಗಿಕ ವಿಚಾರದಲ್ಲಿ ತೊಂದರೆ ಇರುವ ಮಹಿಳೆಯರಿಗೆ ಸಲಹೆ ನೀಡುತ್ತಿದ್ದರು. ಈ ವಿಚಾರ ತಿಳಿದಿದ್ದ ಆರೋಪಿ ಜಗದೀಶ್ ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ತಾನೇ ಸ್ವತಃ ನಕಲಿ ಫೇಸ್ಬುಕ್ ಖಾತೆ ತೆರೆದ ಹಲವಾರು ಮಹಿಳೆಯರಿಗೆ ಅಸಭ್ಯವಾದ ಸಂದೇಶ ಕಳುಹಿಸಿದ್ದ. ಇದರ ಜತೆಗೆ ಧ್ವನಿ ಸಂದೇಶ ಹಾಗೂ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಕಿರುಕುಳ ಕೊಡುತ್ತಿದ್ದ.
ಆರೋಪಿಯ ಬಲೆಯ ಸುಳಿಗೆ ಸಿಲುಕಿದ್ದ ಹಲವು ಮಹಿಳೆಯರಿಗೆ ಈ ಬಗ್ಗೆ ಅನುಮಾನ ಬಂದು ಪದ್ಮಿನಿ ಪ್ರಸಾದ್ ಅವರಿಗೆ ಈ ಸಂಗತಿ ತಿಳಿಸಿದ್ದರು. ಆತಂಕಗೊಂಡ ಪದ್ಮಿನಿ ಪ್ರಸಾದ್ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಕಳೆದ ಫೆ.17ರಂದು ಈ ಕುರಿತು ದೂರು ನೀಡಿದ್ದರು. ಈ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡ ಉತ್ತರ ವಿಭಾಗದ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಜಗದೀಶ್ನ ಸುಳಿವು ಸಿಕ್ಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.