ವೃದ್ಧೆ ಕೈಕಾಲು ಕಟ್ಟಿ ಸುಲಿಗೆ: ಆರು ಮಂದಿ ಸೆರೆ


Team Udayavani, Jan 11, 2023, 11:48 AM IST

tdy-9

ಬೆಂಗಳೂರು: ಇತ್ತೀಚೆಗೆ ಮನೆಯಲ್ಲಿ ಒಂಟಿ ಯಾಗಿದ್ದ ವೈದ್ಯೆಯ ತಾಯಿಯ ಕೈ-ಕಾಲು ಕಟ್ಟಿ ದರೋಡೆ ಮಾಡಿದ್ದ ಪ್ರಕರಣದಲ್ಲಿ ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು, ತಂದೆ-ಮಗ ಸೇರಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಒಡಿಶಾ ಮೂಲದ ಜ್ಞಾನರಂಜನ್‌ ನಾಥ್‌ ಅಲಿಯಾಸ್‌ ಬಾಪಿ (36), ಶ್ರೀಕಾಂತ್‌ ದಾಶ್‌(40), ಸುಭಾಷ್‌ ಬಿಸ್ವಾಲ್‌(41), ಬಿಷ್ಣು ಮೋಹನ್‌ ಖಟುವಾ(35), ಬಿಷ್ಣು ಚರಣ್‌ ಬೆಹೆರಾ(61) ಹಾಗೂ ಸುದಾಂಶು ಬೆಹೆರಾ(21) ಬಂಧಿತರು.

ಆರೋಪಿಗಳಿಂದ 3.50 ಲಕ್ಷ ರೂ. ಮೌಲ್ಯದ 66 ಗ್ರಾಂ ಚಿನ್ನಾಭರಣ, 1.50 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಜ.3ರಂದು ಕುಮಾರಸ್ವಾಮಿ ಲೇಔಟ್‌ನ 6ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆಯ ನಿವಾಸಿ ಶ್ರೀಲಕ್ಷ್ಮೀ(57) ಎಂಬುವರ ಮನೆಗೆ ನಾಲ್ವರು ದುಷ್ಕರ್ಮಿಗಳು ನುಗ್ಗಿ ಅವರ ಕೈ-ಕಾಲು ಕಟ್ಟಿ ಬಾಯಿಗೆ ಪ್ಲಾಸ್ಟ್‌ ಹಾಕಿ ಬೆದರಿಸಿ, ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಶ್ರೀಲಕ್ಷ್ಮೀಯ ಪುತ್ರಿ ವೈದ್ಯೆ ವೈಷ್ಣವಿ ಸುರೇಶ್‌ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸ್‌ ಇನ್ಸ್ ಪೆಕ್ಟರ್‌ ಬಿ.ಎಂ.ಕೊಟ್ರೇಶಿ ನೇತೃತ್ವದ ತಂಡ ಘಟನೆ ನಡೆದು 48 ಗಂಟೆಯೊಳಗೆ ಎಲ್ಲ ಆರೋಪಿಗಳನ್ನು ಬಂಧಿಸಿದೆ. ‌

ವೈದ್ಯೆ ವೈಷ್ಣವಿ ಸುರೇಶ್‌ ಅವರ ವಿವಾಹವಾಗಿದ್ದು, ಬಸವನಗುಡಿಯ ಲಾಲ್‌ಬಾಗ್‌ ವೆಸ್ಟ್‌ಗೇಟ್‌ ಬಳಿಯ ಪತಿಯ ಮನೆಯಲ್ಲಿ ವಾಸವಾಗಿದ್ದರು. ಗರ್ಭವತಿಯಾಗಿದ್ದರಿಂದ ತಿಂಗಳ ಹಿಂದೆ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ತಾಯಿ ಮನೆಗೆ ಬಂದಿದ್ದರು. ಇಲ್ಲಿಂದಲೇ ಕುಮಾರಸ್ವಾಮಿ ಲೇಔಟ್‌ ನಲ್ಲಿರುವ ಕ್ಲಿನಿಕ್‌ಗೆ ಹೋಗಿ ಬರುತ್ತಿದ್ದಾರೆ. ಈ ಮನೆಯಲ್ಲಿ ತಾಯಿ ಶ್ರೀಲಕ್ಷ್ಮೀ ಹಾಗೂ ಸಹೋದರ ಪವನ್‌ಕುಮಾರ್‌ ವಾಸವಾಗಿದ್ದರು.

ವೃದ್ಧೆಯ ಕೈ, ಕಾಲು ಕಟ್ಟಿ ದರೋಡೆ: ಜ.3ರಂದು ಸಂಜೆ ವೈದ್ಯೆ ವೈಷ್ಣವಿ ಸುರೇಶ್‌ ಕ್ಲಿನಿಕ್‌ಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ತಾಯಿ ಶ್ರೀಲಕ್ಷ್ಮೀ ಒಂಟಿಯಾಗಿದ್ದರು. ಇದೇ ಸಮಯಕ್ಕೆ ನಾಲ್ವರು ದುಷ್ಕರ್ಮಿಗಳು, ಏಕಾಏಕಿ ಮನೆಗೆ ನುಗ್ಗಿ ಶ್ರೀಲಕ್ಷ್ಮೀ ಅವರ ಕೈ-ಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್‌ ಹಾಕಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ರಾತ್ರಿ 9 ಗಂಟೆಗೆ ವೈಷ್ಣವಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿತ್ತು.

ದರೋಡೆ ವಿಚಾರ ಗೊತ್ತಿಲ್ಲ : ಶ್ರೀಲಕ್ಷೀ ಅವರ ಮನೆಯಲ್ಲಿ ಪ್ರಾಮಾಣಿಕರಾಗಿ ಕೆಲಸ ಮಾಡಿಕೊಂಡಿದ್ದ ಕಲ್ಪನಾ ಹಾಗೂ ಶಿವಾಜಿ ದಂಪತಿಗೆ ಮಾಲೀಕರ ಮನೆಯಲ್ಲಿ ತಂದೆ ಹಾಗೂ ಸಹೋದರ ಸೇರಿ ದರೋಡೆ ಮಾಡಿಸಿರುವ ವಿಚಾರ ಗೊತ್ತಿಲ್ಲ. ವಸತಿ ಬದಲಿಸುತ್ತಿರುವ ಬಗ್ಗೆಯಷ್ಟೇ ತಾಯಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯನ್ನು ಪಡೆದ ಅಪ್ಪ-ಮಗ ಈ ದರೋಡೆ ಸ್ಕೆಚ್‌ ಹಾಕಿ ಕಾರ್ಯಗತಗೊಳಿಸಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.