ಹೆಂಡತಿ ಕೊಲೆಗೈದವನ ಬಂಧನ

Team Udayavani, Jan 23, 2023, 11:40 AM IST

tdy-7

ಬೆಂಗಳೂರು: ಗರ್ಭಿಣಿ ಪತ್ನಿಯನ್ನು ಕೊಂದು ವಿಮಾನದಲ್ಲಿ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಸುದ್ದು ಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ತಾವರೆಕೆರೆಯ ಸುಭಾಷ್‌ನಗರ ನಿವಾಸಿ ನಾಸೀರ್‌ ಹುಸೇನ್‌ (34) ಬಂಧಿತ.

ಆರೋಪಿ ಜ.15ರಂದು ಪತ್ನಿ ನಜ್ಮಾಖಾನ್‌ರನ್ನು ಉಸಿರುಗಟ್ಟಿಸಿ ಕೊಲೆಗೈದು ಪರಾರಿಯಾಗಿದ್ದ. ಇದೀಗ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿ ದೆಹಲಿಯಲ್ಲಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ. ಪಶ್ಚಿಮ ಬಂಗಾಳ ಮೂಲದ ನಾಸೀರ್‌ ಹುಸೇನ್‌ ಐದಾರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಸುಭಾಷ್‌ನಗರದಲ್ಲಿ ವಾಸವಾಗಿದ್ದ. ಖಾಸಗಿ ಕಂಪನಿಯಲ್ಲಿ ಲ್ಯಾಪ್‌ಟಾಪ್‌ ರಿಪೇರಿ ಕೆಲಸ ಮಾಡುತ್ತಿದ್ದ. ಜತೆಗೆ ಸುಭಾಷ್‌ನಗರದಲ್ಲಿ ಸಣ್ಣ ಕೊಠಡಿಯಲ್ಲಿಯೂ ಖಾಸಗಿಯಾಗಿ ಲ್ಯಾಪ್‌ಟಾಪ್‌ ರಿಪೇರಿ ಮಾಡುತ್ತಿದ್ದ. ಇದೇ ವೇಳೆ ಕೊಠಡಿಯ ಮನೆ ಮುಂದೆ ವಾಸವಾಗಿದ್ದ ನಜ್ಮಾ ಖಾನ್‌ರನ್ನು ಪ್ರೀತಿಸಿದ್ದು, ಆರು ತಿಂಗಳ ಹಿಂದೆ ಹಿರಿಯ ಸಮ್ಮುಖದಲ್ಲಿ ಮದುವೆಯಾಗಿದ್ದರು. ಸುಭಾಷ್‌ನಗರದಲ್ಲೇ ದಂಪತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಈ ಮಧ್ಯೆ 4 ತಿಂಗಳಿಂದ “ನಿನ್ನ ಸಹೋದರಿ ಪತಿ ಜತೆ ಅಕ್ರಮ ಸಂಬಂಧ ಹೊಂದಿದ್ದಿಯಾ?’ ಎಂದು ನಿತ್ಯ ಜಗಳ ನಡೆಸುತ್ತಿದ್ದ. ಹೀಗಾಗಿ ಒಂದು ತಿಂಗಳ ಹಿಂದಷ್ಟೇ ಸುದ್ದು ಗುಂಟೆಪಾಳ್ಯ ಠಾಣೆ ವ್ಯಾಪ್ತಿ ತಾವರೆಕೆರೆ ಮುಖ್ಯರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಆದರೂ ಪತ್ನಿ ಮೇಲೆ ನಿತ್ಯ ಹಲ್ಲೆ ನಡೆಸುತ್ತಿದ್ದ. ಇತ್ತೀಚೆಗಷ್ಟೇ ಆಕೆ ಗರ್ಭಿಣಿಯಗಿದ್ದಳು ಎಂದು ಹೇಳಲಾಗಿದೆ. ಅದಕ್ಕೆ “ನಾನು ಕಾರಣನಲ್ಲ. ನೀನು ಬೇರೆಯೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿರುವೆ’ ಎಂದು ಆರೋಪಿ ಹಲ್ಲೆ ನಡೆಸಿದ್ದಾನೆ. ಭಾನುವಾರ ರಾತ್ರಿಯೂ ಜಗಳ ತೆಗೆದಿದ್ದು, ಕುತ್ತಿಗೆ ಹಿಸುಕಿ ಮತ್ತು ಉಸಿರುಗಟ್ಟಿಸಿ ಕೊಲೆಗೈದು, ರಾತ್ರಿ 10 ಗಂಟೆ ಸುಮಾರಿಗೆ ವಾಟ್ಸ್‌ಆ್ಯಪ್‌ನಲ್ಲಿ ಭಾಮೈದನಿಗೆ “ನಿನ್ನ ಸಹೋದರಿಯನ್ನು ಫ್ಲ್ಯಾಟ್‌ನಲ್ಲಿ ಕೊಲೆಗೈದಿದ್ದೇನೆ. ಎಂದು ಮೆಸೇಜ್‌ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.

ಕೃತ್ಯಕ್ಕೂ ಮೊದಲೇ ವಿಮಾನ ಟಿಕೆಟ್‌ : ಪತ್ನಿ ಕೊಲೆಗೈಯಲು ಮೊದಲೇ ಸಂಚು ರೂಪಿಸಿದ್ದ ಆರೋಪಿ, ದೆಹಲಿ ಮಾರ್ಗವಾಗಿ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಲು ವಿಮಾನ ಟಿಕೆಟ್‌ ಕಾಯ್ದಿರಿಸಿದ್ದ. ನಂತರ ಟ್ಯಾಕ್ಸಿ ಚಾಲಕನಿಗೆ 4000 ರೂ. ಫೋನ್‌ ಪೇ ಮಾಡಿದ್ದ. ಪೊಲೀಸರು ತನ್ನ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ, ಪಶ್ಚಿಮ ಬಂಗಾಳದಿಂದ ದೆಹಲಿಗೆ ಪರಾರಿಯಾಗುತ್ತಿದ್ದ. ಈ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ದೆಹಲಿ ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.