ಕಾಲೇಜಿನ ಮಹಿಳಾ ಶೌಚಾಲಯಕ್ಕೆ ನುಗ್ಗಿ ಅಸಭ್ಯ ವರ್ತನೆ: ಟೆಕಿ ಬಂಧನ
Team Udayavani, Jan 24, 2023, 9:46 AM IST
ಬೆಂಗಳೂರು: ಖಾಸಗಿ ಕಾಲೇಜಿನ ಮಹಿಳಾ ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ಟೆಕಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಹನುಮಂತನಗರ ನಿವಾಸಿ ಅಜಯ್ ಕುಮಾರ್ (39) ಬಂಧಿತ.
ಜ.10ರಂದು ಜಯನಗರದಲ್ಲಿರುವ ಖಾಸಗಿ ಕಾಲೇಜಿನ ಮಹಿಳಾ ಶೌಚಾಲಯಕ್ಕೆ ನುಗ್ಗಿದ್ದ ಅಜಯ್ ಕುಮಾರ್, ಅದೇ ವೇಳೆ ಶೌಚಾಲಯಕ್ಕೆ ಬಂದ ವಿದ್ಯಾರ್ಥಿನಿಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ. ಗಾಬರಿಗೊಂಡ ವಿದ್ಯಾರ್ಥಿನಿ ಜೋರಾಗಿ ಕೂಗುತ್ತಿದ್ದಂತೆ ಆಕೆಯನ್ನು ಶೌಚಾಲಯದಲ್ಲಿ ಕೂಡಿಹಾಕಿ ಸ್ಥಳದಿಂದ ಪರಾರಿಯಾಗಿದ್ದ. ಸಹ ವಿದ್ಯಾರ್ಥಿಗಳು ವಿದ್ಯಾರ್ಥಿಯನ್ನು ಹೊರಗಡೆ ಕರೆತಂದಿದ್ದರು. ಈ ವಿಚಾರ ಕುರಿತು ಕಾಲೇಜಿನಲ್ಲಿ ಪ್ರತಿಭಟನೆ ನಡೆದು, ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮಾನಸಿಕ ಅಸ್ವಸ್ಥ?: ಅಜಯ್ ಕುಮಾರ್ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ದುಬೈನಲ್ಲಿ ಕೆಲಸ ಮಾಡುತ್ತಿದ್ದ. ಸದ್ಯ ಕೆಲಸ ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದಾನೆ. ಈ ಮಧ್ಯೆ ಕೌಟುಂಬಿಕ ವಿಚಾರವಾಗಿ ಕುಟುಂಬ ಸದಸ್ಯರಿಂದ ಈತ ದೂರವಾಗಿದ್ದಾನೆ. ಬೆಂಗಳೂರಿನಲ್ಲಿ ಕಿರುತೆರೆ ಮತ್ತು ಹಿರಿತೆರೆಯಲ್ಲಿ ನಟನೆ ಮಾಡಲು ಯತ್ನಿಸುತ್ತಿದ್ದ ಎಂಬುದು ಗೊತ್ತಾಗಿದೆ. ಮಾನಸಿಕ ಖನ್ನತೆಗೊಳಗಾಗಿರುವ ಅಜಯ್ ಕುಮಾರ್‌ಗೆ ಗ್ಯಾಸ್ಟ್ರೋ ಸಮಸ್ಯೆಯಿದೆ. ಹೀಗಾಗಿ ಯಾವುದೇ ಆಹಾರ ಸೇವಿಸಿದ ಕೂಡಲೇ ಶೌಚಾಲಯಕ್ಕೆ ಹೋಗಬೇಕಾಗುತ್ತದೆ. ಜ.10ರಂದು ಕಾಲೇಜು ಬಳಿ ತಿಂಡಿ ತಿಂದಿದ್ದ ಅಜಯ್ ಕುಮಾರ್, ತುರ್ತು ಶೌಚಾಲಯಕ್ಕೆ ಹೋಗಲು ಪಕ್ಕದಲ್ಲೇ ಇದ್ದ ಕಾಲೇಜಿನ ಶೌಚಾಲಯಕ್ಕೆ ಹೋಗಿದ್ದಾನೆ. ಈ ವೇಳೆ ಅಚಾತುರ್ಯ ನಡೆದಿದೆ ಎಂದು ಪೊಲೀಸರು ಹೇಳಿದರು.
ವಿದ್ಯಾರ್ಥಿನಿ ಜತೆ ಅಸಭ್ಯವರ್ತನೆ ತೋರಿದ ಆರೋಪದ ಮೇಲೆ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಅಜಯ್ ಕುಮಾರ್ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದಾನೆ. ಈ ಬಗ್ಗೆ ವೈದ್ಯಕೀಯ ತಪಾಸಣೆ ನಡೆಸಿ ಖಚಿತ ಪಡಿಸಿಕೊಳ್ಳಬೇಕಿದೆ. ತನಿಖೆ ನಡೆಯುತ್ತಿದೆ. –ಕೃಷ್ಣಕಾಂತ್, ದಕ್ಷಿಣ ವಿಭಾಗದ ಡಿಸಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.