ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾದ ಅತ್ಯಾಚಾರ ಆರೋಪಿ


Team Udayavani, Apr 2, 2022, 11:22 AM IST

ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ,ಪೊಲೀಸರನ್ನು ತಳ್ಳಿ ಪರಾರಿಯಾದ ಅತ್ಯಾಚಾರ ಆರೋಪಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ನೇಪಾಳ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ರೌಡಿಶೀಟರ್‌ ಅವೇಜ್‌(22)ನನ್ನು ಬೌರಿಂಗ್‌ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ.

ಗುರುವಾರ ಮುಂಜಾನೆ ಡಿ.ಜೆ.ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನೇಪಾಳ ಮೂಲದ ಮಹಿಳೆಯನ್ನು ಎಳೆ ದೊಯ್ದು ಅತ್ಯಾಚಾರ ಎಸಗಿದ್ದ. ಘಟನೆ ನಡೆದ ಕೆಲ ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ.

ಈತನ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್‌ ಗುಳೇದ್‌ ಹೇಳಿದರು. ರೌಡಿ ಅವೇಜ್‌ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ 27 ಪ್ರಕರಣಗಳು ದಾಖಲಾಗಿವೆ. ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆಯ ರೌಡಿಶೀಟರ್‌ ಆಗಿದ್ದಾನೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆಂದು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆ ಮುಗಿಸಿ ಠಾಣೆಗೆ ವಾಪಸು ಕರೆದೊಯ್ಯಲು ಜೀಪು ಹತ್ತಿಸಲಾಗುತ್ತಿತ್ತು. ಅದೇ ವೇಳೆ ಪೊಲೀಸರನ್ನು ತಳ್ಳಿ ಓಡಿ ಹೋಗಿದ್ದಾನೆ. ಆತನನ್ನು ಬೆನ್ನಟ್ಟಿದರೂ ಸಿಕ್ಕಿಲ್ಲ ಎಂದು ಹೇಳಿದರು.

ಇಬ್ಬರು ಪೊಲೀಸ್‌ ಸಿಬ್ಬಂದಿ ವಿರುದ್ಧವೂ ಕ್ರಮ: ಕಳೆದ ಜುಲೈನಲ್ಲಿ ಆರೋಪಿಯನ್ನು ಗಡಿಪಾರು ಮಾಡಲಾಗಿತ್ತು. ಈ ಅವಧಿಯಲ್ಲಿಯೂ ಆರೋಪಿಯು ಅಪರಾಧ ಕೃತ್ಯ ಎಸೆಗಿದ್ದಾನೆ. ಇದೀಗ ಅತ್ಯಾಚಾರ ಎಸಗಿ ಪೊಲೀಸರ ವಶದಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಹೀಗಾಗಿ ಆತನ ವಿರುದ್ಧ ಮತ್ತೂಂದು ಪ್ರಕರಣ ದಾಖಲಿಸಲಾಗಿದೆ. ಇನ್ನು ಆರೋಪಿಯು ತಪ್ಪಿಸಿಕೊಳ್ಳಲು ಕಾರಣರಾದ ಇಬ್ಬರು ಪೊಲೀಸ್‌ ಸಿಬ್ಬಂದಿ ವಿರುದ್ಧವೂ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಹಿಡಿದು ಥಳಿಸಿದ್ದ ಜನ: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಮಾ.31ರ ಬೆಳಗ್ಗೆ ನೇಪಾಳದ ಮಹಿಳೆ ಮೇಲೆ ರೌಡಿ ಅವೇಜ್‌ ಅತ್ಯಾಚಾರ ಎಸಗಿದ್ದ. ಮಹಿಳೆ ಕೂಗಾಟ ಕೇಳಿ ರಕ್ಷಣೆಗೆ ಹೋಗಿದ್ದ ಸ್ಥಳೀಯರು, ಅವೇಜ್‌ನನ್ನು ಹಿಡಿದು ಥಳಿಸಿದ್ದರು. ನಂತರ, ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಕೈಗೆ ಒಪ್ಪಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.