Theft Case: ಜೈಲಿಂದ ಹೊರಬಂದ ಕೂಡಲೇ ಮತ್ತೆ ಕಳ್ಳತನಕ್ಕಿಳಿದ ಆರೋಪಿ!
Team Udayavani, Sep 4, 2024, 10:02 AM IST
ಬೆಂಗಳೂರು: ಹಗಲು ವೇಳೆ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ರಸ್ತೆಯ ಜನತಾ ಕಾಲೋನಿ ನಿವಾಸಿ ನಾಗರಾಜ್ ಅಲಿಯಾಸ್ ಮತ್ತಿ ನಾಗ(32) ಬಂಧಿತ. ಆರೋಪಿಯಿಂದ 8 ಲಕ್ಷ ರೂ. ಮೌಲ್ಯದ 118 ಗ್ರಾಂ ಚಿನ್ನಾಭರಣ, 203 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 1 ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಎನ್‌ಟಿಆರ್‌ಲೇಔಟ್‌ನ ಮನೆಯೊಂದರ ಬೀಗ ಮುರಿದು ಬೀರುವಿನ ಲಾಕರ್ ನಲ್ಲಿದ್ದ 78 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆತ ರೂಢಿಗತ ಆರೋಪಿಯಾಗಿದ್ದು, ಈತನ ವಿರುದ್ಧ ಮಾರತ್ತಹಳ್ಳಿ. ಆನೇಕಲ್, ಕೋಣನಕುಂಟೆ, ಸೂರ್ಯ ನಗರ ಸೇರಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 12 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಇತ್ತೀಚೆಗಷ್ಟೇ ಆರೋಪಿ ಪ್ರಕರಣವೊಂದರಲ್ಲಿ ರಾಮನಗರ ಜೈಲು ಸೇರಿದ್ದ ಇದೀಗ ಬಿಡುಗಡೆಯಾಗಿ ಬಂದು ಕೆಲ ದಿನಗಳಲ್ಲೇ ಮತ್ತೆ ಮನೆ ಕಳ್ಳತನ ಮಾಡಿ ಜೈಲು ಸೇರಿದ್ದಾನೆ. ಮಡಿಕೇರಿ ಮೂಲದ ಆರೋಪಿ ಹಲವು ವರ್ಷಗಳಿಂದ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.