Assault case: 10 ವರ್ಷಗಳಿಂದ ಕೋರ್ಟ್‌ಗೆ ಗೈರಾಗಿದ್ದ ಆರೋಪಿ ಸೆರೆ
Team Udayavani, Jun 1, 2024, 10:48 AM IST
ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬನಶಂಕರಿಯ ಭವಾನಿ ನಗರ ನಿವಾಸಿ ಬಿ.ಆರ್. ನಟರಾಜ್ (51) ಬಂಧಿತ ಆರೋಪಿ. ಈತನ ವಿರುದ್ಧ 2014ರಲ್ಲಿ ಹಲ್ಲೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆರೋಪಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಆರೋಪಿಯ ಬಂಧನಕ್ಕೆ ನ್ಯಾಯಾಲಯ ಹಲವು ಬಾರಿ ವಾರೆಂಟ್ ಜಾರಿ ಮಾಡಿತ್ತು. ಈ ಸಂಬಂಧ ಆರೋಪಿಯ ಬಂಧನಕ್ಕೆ ರಚಿಸಲಾಗಿದ್ದ ಪೊಲೀಸರ ವಿಶೇಷ ತಂಡಕ್ಕೆ ಇತ್ತೀಚೆಗೆ ಆರೋಪಿಯು ಚನ್ನಮ್ಮನಕೆರೆ ಅಚ್ಚುಕಟ್ಟು ಸಮೀಪದ ಗೌಡರಪಾಳ್ಯದ ದುರ್ಗಾಂಭ ದೇವಾಲಯದ ಬಳಿ ಬಂದಿದ್ದಾನೆ ಎಂಬ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿ, ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.