ದೂರು ನೀಡಲು ಬಂದ ಮಹಿಳೆ ಜತೆ ಎಸಿಪಿ ಅಸಭ್ಯ ವರ್ತನೆ?
Team Udayavani, Nov 28, 2017, 12:19 PM IST
ಬೆಂಗಳೂರು: ಹಲ್ಲೆ ಪ್ರಕರಣವೊಂದರ ವಿಚಾರಣೆ ವೇಳೆ ಯಶವಂತಪುರ ಎಸಿಪಿ ರವಿಪ್ರಸಾದ್ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತೆ ಸೌಮ್ಯ, “ಹೆಸರುಘಟ್ಟ ನಿವಾಸಿಗಳಾದ ಹನುಮಂತರಾಯಪ್ಪ ಹಾಗೂ ರವಿ ಎಂಬುವರು ದೇವಾಲಯದ ಟ್ರಸ್ಟ್‌ನ ಸದಸ್ಯತ್ವ ವಿಚಾರದಲ್ಲಿ ನನ್ನ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ, ನನ್ನ ಗುಪ್ತಾಂಗ ಮುಟ್ಟಿ ಲೈಂಗಿಕವಾಗಿ ದೌರ್ಜನ್ಯವೆಸಗಿದ್ದರು.
ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಆದರೆ, ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿರಲಿಲ್ಲ. ನಂತರ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೆ. ಆಯುಕ್ತರ ಸೂಚನೆ ಮೇರೆಗೆ ಎಸಿಪಿ ರವಿಪ್ರಸಾದ್ ನನಗೆ ವಿಚಾರಣೆ ಹಾಜರಾಗುವಂತೆ ಸೂಚಿಸಿದ್ದರು.
“ವಿಚಾರಣೆ ಪ್ರಕ್ರಿಯೆ ಮುಗಿದ ಬಳಿಕ ಘಟನಾ ಸ್ಥಳಕ್ಕೆ ಬಂದ ಎಸಿಪಿ ರವಿಪ್ರಸಾದ್ ಹಾಗೂ ಇನ್ಸ್‌ಪೆಕ್ಟರ್ ವೆಂಕಟೇಶ್‌ಗೌಡ, ನನ್ನ ಪರ ಸಾಕ್ಷ್ಯ ಹೇಳುತ್ತಿದ್ದ ವ್ಯಕ್ತಿಗಳಿಗೆ ಬೆದರಿಕೆಯೊಡ್ಡಿದ್ದರು. ಇದರಿಂದ ಯಾರೂ ನನ್ನ ಪರ ಸಾಕ್ಷ್ಯ ಹೇಳುತ್ತಿಲ್ಲ.
ಹನುಮಂತರಾಯಪ್ಪ ಮತ್ತು ರವಿ ನನ್ನ ಮನೆ ಬಳಿ ಬಂದು ಪ್ರಕರಣ ವಾಪಸ್ ಪಡೆಯದಿದ್ದರೆ, ಅತ್ಯಾಚಾರ ಮಾಡಿ ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಪದೇ ಪದೆ ಬೆದರಿಕೆಯ ಕರೆಗಳು ಬರುತ್ತಿವೆ. ಒಂದೊಮ್ಮೆ ನನ್ನ ಪ್ರಾಣಕ್ಕೆ ಕುತ್ತು ಬಂದರೆ ಹನುಮಂತರಾಯಪ್ಪ, ರವಿ ಮತ್ತು ಎಸಿಪಿ ರವಿಪ್ರಸಾದ್, ಇನ್ಸ್‌ಪೆಕ್ಟರ್ ವೆಂಕಟೇಗೌಡ ಅವರೇ ನೇರ ಹೊಣೆ,’ ಎಂದಿದ್ದಾರೆ.
ಬಟ್ಟೆ ತೆಗೆದು ತೋರಿಸು ಎಂದರು!: “ಆಯುಕ್ತರ ಸೂಚನೆ ಮೇರೆಗೆ ನ.18ರಂದು ವಿಚಾರಣೆಗೆ ಹಾಜರಾದಾಗ ಎಸಿಪಿ ರವಿಪ್ರಸಾದ್, ಏಕೆ ಹೊಡೆದರು, ಏನೆಲ್ಲ ಪದಗಳಿಂದ ನಿಂದಿಸಿದರು ಎಂದು ಪ್ರಶ್ನಿಸಿದರು. ಅದಕ್ಕೆಲ್ಲ ಸ್ಪಷ್ಟ ಉತ್ತರ ಕೊಟ್ಟೆ. ನಿನ್ನ ಗುಪ್ತಾಂಗ ಮಟ್ಟಿದರು ಎಂದು ಆರೋಪಿಸಿದ್ದಿಯಾ, ಹೇಗೆ ಮುಟ್ಟಿದರು, ಬೇರೆ ಎಲ್ಲಿಲ್ಲಿ ಕೈ ಹಾಕಿದರು ತೋರಿಸು ಎಂದು ಅಸಭ್ಯವಾಗಿ ಕೇಳಿದರು. ಹೇಗೆ ತೋರಿಸಲಿ ಎಂದು ನಾನು ಗಾಬರಿಯಿಂದ ಪ್ರಶ್ನಿಸಿದೆ.
ಅದಕ್ಕೆ ಅವರು ಬಟ್ಟೆಗಳನ್ನು ತೆಗೆದು ತೋರಿಸು ಎಂದು ಹೇಳಿದರು. ಇದಕ್ಕೆ ನಿರಾಕರಿಸಿದಾಗ ಅಲ್ಲಿಯೇ ಇದ್ದ ಇನ್ಸ್‌ಪೆಕ್ಟರ್ ವೆಂಕಟೇಶ್‌ಗೌಡ, ವಿಚಾರಣೆ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಹೇಳಿದಂತೆ ಕೇಳಬೇಕು ಎಂದು ಬೆದರಿಸಿದರು. ಜತೆಗೆ ಇಷ್ಟಕ್ಕೆಲ್ಲಾ ಹೆದರುವ ನೀನು ದೂರು ನೀಡಲು ಯಾಕೆ ಬಂದೆ ಎಂದು ಪ್ರಶ್ನಿಸಿದರು,’ ಎಂದು ಸೌಮ್ಯ ಆರೋಪಿಸಿದ್ದಾರೆ.
ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಈ ಹಿಂದೆ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯ ದೇವಸ್ಥಾನದ ಗಲಾಟೆ ಬಗ್ಗೆ ದೂರು ದಾಖಲಾಗಿತ್ತು. ಈ ಸಂಬಂಧ ಎಸಿಪಿ ರವಿಪ್ರಸಾದ್ ತನಿಖೆ ನಡೆಸುತ್ತಿದ್ದಾರೆ. ಆದರೆ, ಇದೀಗ ಅದೇ ಎಸಿಪಿ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ ಸೂಚಿಸಿದ್ದೇನೆ.
-ಮಾಲಿನಿ ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಆಯುಕ್ತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.