ನಿಯಮ ಮೀರಿ ಮಾಲಿನ್ಯ ಮಾಡಿದ ಕೈಗಾರಿಕೆಗಳ ವಿರುದ್ಧ ಕ್ರಮ: ಸಚಿವ ಈಶ್ವರ ಖಂಡ್ರೆ
Team Udayavani, Jul 7, 2023, 6:45 AM IST
ವಿಧಾನಸಭೆ: ಸರ್ಕಾರದ ನಿಯಮಗಳನ್ನು ಮೀರಿ ಪರಿಸರ ಮಾಲಿನ್ಯವನ್ನುಂಟು ಮಾಡುತ್ತಿರುವ ಕೈಗಾರಿಕೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ಅಷ್ಟೇಯಲ್ಲ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪ್ರಶ್ನೋತ್ತರ ವೇಳೆ ಬಿಜೆಪಿಯ ಸಿದ್ದು ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹುಮನಾಬಾದ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಕೆಲವು ಕೈಗಾರಿಕೆಗಳು ಪರಿಸರ ಮಾಲಿನ್ಯ ಮಾಡುತ್ತಿವೆ. ಈ ಕುರಿತು ಈಗಾಗಲೇ ತಜ್ಞರ ತಂಡವನ್ನು ಕಳಿಸಿ ವರದಿ ಪಡೆದುಕೊಂಡಿದ್ದೇನೆ.
ಮಾಲಿನ್ಯ ನಿಯಂತ್ರಣ ಮಾಡಲೇಬೇಕು ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಕೆಲವರು ನಿಯಮ ಮೀರುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಅಗತ್ಯ ಬಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ರಾತ್ರಿ ವೇಳೆ ಗಸ್ತು ಹೆಚ್ಚಿಸಿ ಮಾಲಿನ್ಯ ನಿಯಂತ್ರಣಕ್ಕೆ ಒತ್ತು ನೀಡುವುದಾಗಿ ಸಚಿವ ಖಂಡ್ರೆ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.