ಫೆಬ್ರವರಿ ವೇಳೆಗೆ ನೊರೆ ಸಮಸ್ಯೆಗೆ ಕ್ರಮ


Team Udayavani, Jan 23, 2018, 11:59 AM IST

lake-geroge.jpg

ಬೆಂಗಳೂರು: ಫೆಬ್ರವರಿ ವೇಳೆಗೆ ಬೆಳ್ಳಂದೂರು ಕೆರೆಯ ನೊರೆ ಸಮಸ್ಯೆ ಹಾಗೂ ಬೆಂಕಿ ಅವಘಡಗಳ ನಿವಾರಣೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಸ್ಥಳೀಯ ನಿವಾಸಿಗಳಿಗೆ ಭರವಸೆ ನೀಡಿದ್ದಾರೆ.

ಬೆಳ್ಳಂದೂರು ಕೆರೆಯ ಸಂರಕ್ಷಣೆಯ ಕುರಿತು ವಿವಿಧ ನಾಗರಿಕ ಕ್ಷೇಮಾಭಿವೃದ್ಧಿ ಸಂಘಗಳೊಂದಿಗೆ ಸೋಮವಾರ ಬಿಎಂಆರ್‌ಡಿಎ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಬೆಳ್ಳಂದೂರು ಸೇರಿ ನಗರದ ಇತರೆ ಕೆರೆಗಳ ಪುನಶ್ಚೇತನಕ್ಕೆ ಈಗಾಗಲೇ ಸರ್ಕಾರ ಕ್ರಮಕೈಗೊಂಡಿದೆ ಎಂದರು. 

ಕೆರೆಗೆ ಪ್ರವೇಶಿಸುತ್ತಿರುವ ಒಳಚರಂಡಿ ನೀರು ನೊರೆಗೆ ಕಾರಣವಾಗಿದ್ದು, ಕೆರೆಗೆ ಕೊಳಚೆ ನೀರು ಸೇರುವುದನ್ನು ತಪ್ಪಿಸಲು ಈ ಭಾಗದಲ್ಲಿ ಈಗಾಗಲೇ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ವರ್ತೂರು ಮತ್ತು ಬೆಳ್ಳಂದೂರು ಕೆರೆಗಳಲ್ಲಿನ ಹೆಚ್ಚುವರಿ ನೀರು ಸಮರ್ಪಕವಾಗಿ ಹರಿಯಲು ಸ್ಲಿವ್‌ ಗೇಟ್‌ಗಳನ್ನು ಅಳವಡಿಸಲು ಯೋಜನೆ ರೂಪಿಸಿದ್ದು, ಇದರಿಂದ ನೊರೆ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

ರಕ್ಷಣಾ ಭೂಮಿ ಹೊರತುಪಡಿಸಿ ಉಳಿದ ಕಡೆ ಕೂಡಲೇ ತಂತಿಬೇಲಿ ಅಳವಡಿಸಬೇಕು. ವಾರದೊಳಗೆ ಕೆರೆಯಲ್ಲಿನ ಜೊಂಡು ತೆರವು ಕಾರ್ಯಾಚರಣೆ ಆರಂಭಿಸಿ, ನೀರಿನಲ್ಲಿ ಆಮ್ಲಜನಕದ ಪ್ರಮಾಣ ಹೆಚ್ಚಿಸಲು ಏರೇಟರ್‌ ಹಾಗೂ ಕಾರಂಜಿಗಳನ್ನು ಅಳವಡಿಕೆಗೆ ಮುಂದಾಗುವಂತೆ ಬಿಡಿಎ ಆಯುಕ್ತ ರಾಕೇಶ್‌ ಸಿಂಗ್‌ ಅವರಿಗೆ ಸೂಚಿಸಿದ್ದಾರೆ. 

ಜಲಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌ ಮಾತನಾಡಿ, ನಗರದಲ್ಲಿ 140 ಕೋಟಿ ಲೀಟರ್‌ ಕೊಳಚೆ ನೀರು ಉತ್ಪತ್ತಿಯಾಗುತ್ತಿದೆ. ಈ ಪೈಕಿ 106 ಕೋಟಿ ಲೀಟರ್‌ ಕೊಳಚೆ ನೀರನ್ನು ಫೆಬ್ರವರಿ ತಿಂಗಳಾಂತ್ಯಕ್ಕೆ ಶುದ್ಧೀಕರಿಸಲು ಸಾಧ್ಯವಾಗಲಿದೆ. ಜಲಮಂಡಳಿ ನಿರ್ಮಿಸಿರುವ ಎಸ್‌ಟಿಪಿಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದರು. 

ಈ ವೇಳೆ ಮಾತನಾಡಿದ ಸಚಿವ ಜಾರ್ಜ್‌, ಬೆಳ್ಳಂದೂರು ಕೆರೆಯ ಸ್ವತ್ಛತಾ ಕಾರ್ಯ ಪೂರ್ಣಗೊಂಡ ನಂತರ ಕೆರೆಯ ಸುತ್ತಲೂ ವಾಯು ವಿಹಾರಕ್ಕಾಗಿ ಪಾಥ್‌ಗಳ ನಿರ್ಮಾಣ, ಉದ್ಯಾನವನಗಳನ್ನು ನಿರ್ಮಾಣ ಮಾಡಿ ಅದರ ಉಸ್ತುವಾರಿಯನ್ನು ಸ್ಥಳೀಯ ನಿವಾಸಿಗಳಿಗೆ ವಹಿಸಲಾಗುತ್ತದೆ. ಇದರಿಂದ ಕೆರೆಯನ್ನು ಸ್ವತ್ಛವಾಗಿಟ್ಟುಕೊಳ್ಳಲು ಸಾಧ್ಯವಾಗಲಿದೆ ಎಂದರು.

ಅದಕ್ಕೆ ಸಹಮತ ವ್ಯಕ್ತಪಡಿಸಿದ ನಾಗರಿಕ ಕ್ಷೇಮಾಭಿವೃದ್ಧಿ ಸಂಘಗಳ ಮುಖಂಡರು ಕೂಡಲೇ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಮನವಿ ಮಾಡಿದರು. ಈ ವೇಳೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್‌, ಪಾಲಿಕೆಯ ಆಯುಕ್ತ ಮಂಜುನಾಥ್‌ ಪ್ರಸಾದ್‌ ಸೇರಿದಂತೆ ವಿವಿಧ ನಾಗರಿಕ ಕ್ಷೇಮಾಭಿವೃದ್ಧಿ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. 

ಎಲ್ಲ ವಾರ್ಡ್‌ಗಳಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರ: ಬಿಬಿಎಂಪಿಯ ಎಲ್ಲ ವಾರ್ಡ್‌ ಕಚೇರಿಗಳಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರಗಳನ್ನು ಸ್ಥಾಪಿಸುವಂತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಒಪ್ಪಿಗೆ ಸೂಚಿಸಿದ್ದಾರೆ. ಸರ್ಕಾರದ ಎಲ್ಲ ಸೇವೆಗಳಿಗೆ ಆಧಾರ್‌ ಲಿಂಕ್‌ ಮಾಡಬೇಕಿದೆ. ನಗರದಲ್ಲಿರುವ ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಜನರ ದಟ್ಟಣೆ ಹೆಚ್ಚಾಗಿದ್ದು, ವಾರ್ಡ್‌ ಕಚೇರಿಗಳಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಿದ್ದಾರೆ. 

ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ ತಿದ್ದುಪಡಿ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದ್ದು, ಈಗಾಗಲೇ ಕಂಪ್ಯೂಟರ್‌ ಆಪರೇಟರ್‌ಗಳ ತರಬೇತಿ ಹಾಗೂ ಪ್ರಾಮಾಣೀಕರಣ ಪ್ರಕ್ರಿಯೆ ಆರಂಭಿಸಿದೆ. ಆಧಾರ್‌ ಸಂಬಂಧಿಸಿದ ವಿಷಯಗಳಿಗೆ ಸಾರ್ವಜನಿಕರು 22230060 ಅಥವಾ 22230080 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಕೆರೆಯ ಅಂಗಳದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿರುವುದು ಕೆರೆಯಲ್ಲಿನ ರಾಸಾಯನಿಕ ಅಂಶದಿಂದಲ್ಲ. ಕೆರೆಯ ಅಂಗಳದಲ್ಲಿ ಹುಲ್ಲು ಬೆಳೆಯುತ್ತಿದ್ದು, ಅದು ಒಣಗಿದಾಗ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿದ್ದಾರೆ. ಹಾಗೆಯೇ ಕೆಲವರು ಅನಧಿಕೃತವಾಗಿ ಈ ಭಾಗದಲ್ಲಿ ಕಸ ಸುರಿಯುತ್ತಿದ್ದು, ಇದರಿಂದ ಬೆಂಕಿ ಹೊತ್ತಿಕೊಂಡಾಗ ಹೊಗೆಯ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲಾಗುತ್ತದೆ. ಕೆರೆಯ ಸ್ವತ್ಛತಾ ಕಾರ್ಯ ಪೂರ್ಣಗೊಂಡ ನಂತರ ಇಂತಹ ಅವಘಡಗಳು ನಡೆಯದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
-ಕೆ.ಜೆ. ಜಾರ್ಜ್‌, ಸಚಿವ

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.