ಅರಸು ಟ್ರಕ್‌ ಟರ್ಮಿನಲ್‌ ಅಭಿವೃದ್ಧಿಗೆ ಕ್ರಮ


Team Udayavani, Jul 4, 2017, 11:51 AM IST

george-ypr-visit.jpg

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನ ಸಮಗ್ರ ಅಭಿವೃದ್ಧಿಗಾಗಿ ಹತ್ತು ದಿನಗಳೊಳಗಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ಯಶವಂತಪುರ ಬಳಿ ದೇವರಾಜ ಅರಸು ಟ್ರಕ್‌ ಟರ್ಮಿನಲ್‌ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಟರ್ಮಿನಲ್‌ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಮತ್ತು ಟರ್ಮಿನಲ್‌ ಅಧ್ಯಕ್ಷರೊಂದಿಗೆ ಚರ್ಚಿಸಿದರು. 

ನಂತರ ಸುದ್ದಿಗಾರರ ಜತೆ ಮಾತನಾಡಿದ ಜಾರ್ಜ್‌,  “ಟರ್ಮಿನಲ್‌ ಅಭಿವೃದ್ಧಿಗೆ ಪೂರಕವಾಗಿ 10 ದಿನಗಳೊಳಗೆ ಡಿಪಿಆರ್‌ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು. ಕೂಡಲೇ ಬೀದಿ ದೀಪಗಳ ನಿರ್ವಹಣೆ ಹಾಗೂ ಚರಂಡಿಗಳಲ್ಲಿನ ಹೂಳೆತ್ತಲು ಮುಂದಾಗಬೇಕು ಎಂದು ಸೂಚಿಸಲಾಗಿದೆ.  

ನಗರೋತ್ಥಾನ ಯೋಜನೆ ಅಡಿಯಲ್ಲಿ ಟರ್ಮಿನಲ್‌ ಅಭಿವೃದ್ಧಿಪಡಿಸಲಾಗುವುದು. ಟರ್ಮಿನಲ್‌ ಸಂಪರ್ಕಿಸುವ ರಸ್ತೆಗಳಿಗೆ ಡಾಂಬರೀಕರಣ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಲಾರಿಗಳ ನಿಲುಗಡೆ ವ್ಯವಸ್ಥೆ, ಸಿಬ್ಬಂದಿಗೆ ಮೂಲಸೌಕರ್ಯ ಒದಗಿಸಲು ನಗರೋತ್ಥಾನ ಯೋಜನೆಯಡಿಯಲ್ಲಿ 5 ಕೋಟಿ ರೂ. ವೆಚ್ಚ ಮಾಡಲಾಗುವುದು,’ ಎಂದು ಹೇಳಿದರು.

ಮೇಯರ್‌ ಜಿ.ಪದ್ಮಾವತಿ ಮಾತನಾಡಿ, ಟರ್ಮಿನಲ್‌ನಲ್ಲಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ನಿರಂತರ ತ್ಯಾಜ್ಯ ವಿಲೇವಾರಿಗೆ ಸಿಬ್ಬಂದಿ ನೇಮಿಸುವಂತೆಯೂ ತಿಳಿಸಲಾಗಿದೆ ಎಂದು ತಿಳಿಸಿದರು. ಶಾಸಕ ಮುನಿರತ್ನ, ಟರ್ಮಿನಲ್‌ನ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನಯ್ಯ, ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌  ಉಪಸ್ಥಿತರಿದ್ದರು.

ಪೊಲೀಸ್‌ ಚೌಕಿಗೆ ಸಿಬ್ಬಂದಿ ನೇಮಿಸಿ
ಟರ್ಮಿನಲ್‌ನಲ್ಲಿ ವ್ಯಾಪ್ತಿಯಲ್ಲಿ ಮರಳು ದಂಧೆಯಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ ಎಂಬ ದೂರುಗಳಿವೆ. ಹೀಗಾಗಿ ಅಂತಹ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಇಲ್ಲಿರುವ ಪೊಲೀಸ್‌ ಚೌಕಿಯಲ್ಲಿ ಸಿಬ್ಬಂದಿ ನೇಮಿಸಲು ಮುಂದಾಗುವಂತೆ ನಗರ ಪೊಲೀಸ್‌ ಆಯುಕ್ತ ಪ್ರವೀಣ್‌ ಸೂದ್‌ ಅವರಿಗೆ ಜಾರ್ಜ್‌ ಇದೇ ವೇಳೆ ಸೂಚಿಸಿದರು. 

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.