ಸುಪ್ರೀಂ ಆದೇಶದಂತೆ ಕ್ರಮ
Team Udayavani, Dec 13, 2018, 1:58 PM IST
ವಿಧಾನಸಭೆ: ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದರಿಂದ ಈಗಾಗಲೆ ಬಿಡಿಎಯಿಂದ ಎನ್‌ಒಸಿ ಪಡೆದು ಮನೆ ನಿರ್ಮಿಸಿಕೊಂಡವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಯಲಹಂಕ ಶಾಸಕ ವಿಶ್ವನಾಥ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಕೈ ಬಿಟ್ಟಿದ್ದರಿಂದ ಕೆಲವರು ಖಾಸಗಿಯವರು ಮನೆ ಕಟ್ಟಿಕೊಂಡಿದ್ದಾರೆ. ಅವರಿಗೆ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿ ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಬಡಾವಣೆಯಲ್ಲಿ ಈಗಾಗಲೇ ಕೆಲವರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಎಸ್.ಆರ್. ವಿಶ್ವನಾಥ್ ಸರ್ಕಾರದ ಗಮನಸೆಳೆದು, 3566 ಎಕರೆ ಪ್ರದೇಶವನ್ನು ಸಂಪೂರ್ಣ ಭೂಸ್ವಾಧೀನ ಮಾಡಿಕೊಳ್ಳುವಂತೆ ಸುಪ್ರಿಂಕೋರ್ಟ್ ಆ ದೇಶಿಸಿದೆ. ಆದರೆ ಈಗಾಗಲೇ ಬಿಡಿಎಯಿಂದ ಎನ್‌ಒಸಿ ಪಡೆದು ಮನೆ ನಿರ್ಮಿಸಿಕೊಂಡಿರುವವರಿಗೆ ವಿನಾಯ್ತಿ ನೀಡುವ ಬಗ್ಗೆ ಪರಿಶೀಲಿಸುವ ಬಗ್ಗೆ ಸರ್ಕಾರ ಯಾವ ನಿರ್ಧಾರ ತೆಗೆದುಕೊಂಡಿದೆ ಎಂದು ವಿಶ್ವನಾಥ್ ಪ್ರಶ್ನಿಸಿದರು.
ಯೋಜನೆ ಅನುಷ್ಠಾನದಲ್ಲಿ ಸಂದರ್ಭದಲ್ಲಿ ಎನ್‌ಒಸಿ ಪಡೆದವರನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.