ಕಾಣೆಯಾದ ಮೀನುಗಾರರ ರಕ್ಷಿಸಿ ಕರೆತರಲು ಕ್ರಮ
Team Udayavani, Jan 5, 2019, 6:40 AM IST
ಬೆಂಗಳೂರು: ಮಲ್ಪೆ ಬಂದರಿನಿಂದ ಕಳೆದ 18 ದಿನಗಳ ಹಿಂದೆ ತೆರಳಿದ್ದ 7 ಮಂದಿ ಮೀನುಗಾರರಿದ್ದ ಸುವರ್ಣ ತ್ರಿಭುಜ ಎಂಬ ಬೋಟ್ ಅನ್ನು ಪತ್ತೆ ಹಚ್ಚಿ ಮೀನುಗಾರರನ್ನು ರಕ್ಷಿಸಿ ಕರೆತರಲು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತಿ ಶೀಘ್ರದಲ್ಲಿಯೇ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಈ ಮೀನುಗಾರರ ಬೋಟ್ ನಾಪತ್ತೆಯಾದ ಸಂಗತಿ ತಿಳಿದ ತಕ್ಷಣವೇ ಕರಾವಳಿ ಕಾವಲು ಪೊಲೀಸ್, ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯವರಿಗೆ ಮಾಹಿತಿ ನೀಡಿ ಅವರನ್ನು ಜಾಗೃತಗೊಳಿಸಿದ್ದಲ್ಲದೇ ಈ ಎಲ್ಲ ವಿಭಾಗಗಳ ಸಿಬ್ಬಂದಿಗಳ ಕಾರ್ಯಪಡೆ ರಚಿಸಿ ಶೋಧನಾ ಕಾರ್ಯವನ್ನು ಅತ್ಯಂತ ಆದ್ಯತೆಯಿಂದ ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಗತ್ಯ ಇದ್ದಲ್ಲಿ ನೌಕಾದಳದ ಸಹಾಯ ಪಡೆದುಕೊಳ್ಳುವಂತೆ ಮಾರ್ಗದರ್ಶನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ವ್ಯಾಪ್ತಿಯಲ್ಲಷ್ಟೇ ಅಲ್ಲದೆ ಗೋವಾ ಮತ್ತು ಮಹಾರಾಷ್ಟ್ರ ವ್ಯಾಪ್ತಿಯಲ್ಲಿಯೂ ಈ ಶೋಧನಾ ಕಾರ್ಯ ಅತ್ಯಂತ ವ್ಯಾಪಕವಾಗಿ ನಡೆಯುವಂತೆ ನಿಗಾ ವಹಿಸಲಾಗಿದೆ. ಮಹಾರಾಷ್ಟ್ರದ ಬಂದರುಗಳಲ್ಲಿ ಮತ್ತು ಸಮುದ್ರ ಪ್ರದೇಶಗಳಲ್ಲಿ ಶೋಧನಾ ಕಾರ್ಯಕ್ಕೆ ಸೈನದ್ಯ ನೆರವು ಪಡೆದುಕೊಂಡು ಮುಂದುವರಿಯುವ ಸಾಧ್ಯತೆಗಳ ಬಗ್ಗೆಯೂ ಈಗಾಗಲೇ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ಬೇಕಾದ ಅನುಮತಿ ಪಡೆದುಕೊಳ್ಳುವ ಪ್ರಕ್ರಿಯೆ ನಡೆಸಲಾಗಿದೆ. ಉಪ ಮುಖ್ಯಮಂತ್ರಿಯವರು ಹಾಗೂ ಗೃಹ ಸಚಿವರು ಸಹ ಶನಿವಾರ ಉಡುಪಿಗೆ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.
ಮೀನುಗಾರಿಕೆಗೆ ಹೋಗಿ ಸಮುದ್ರದಲ್ಲಿ ನಾಪತ್ತೆಯಾಗಿರುವ ಮೀನುಗಾರರರನ್ನು ಪತ್ತೆ ಹಚ್ಚಿ ಮರಳಿ ಕರೆತರುವ ಕಾರ್ಯಾಚರಣೆಯನ್ನು ಸಂಬಂಧಪಟ್ಟ ಇಲಾಖೆಗಳು ಇನ್ನಷ್ಟು ಚುರುಕಾಗಿ ನಡೆಸಬೇಕು. ಇದಕ್ಕೆ ಅಗತ್ಯ ಇರುವ ಎಲ್ಲ ರೀತಿಯ ನೆರವು ಸರ್ಕಾರದಿಂದ ನೀಡುವಂತೆ ನಾನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಜತೆಯಲ್ಲಿಯೂ ಮಾತನಾಡುತ್ತೆನೆ. ಕಾಣೆಯಾಗಿರುವ ಎಲ್ಲರೂ ಸುರಕ್ಷಿತವಾಗಿ ತಮ್ಮವರನ್ನು ಸೇರಿಕೊಳ್ಳುವಂತಾಗಲಿ.
-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ನಿರ್ಲಕ್ಷ್ಯಕ್ಕೆ ಅನಂತ ಕುಮಾರ್ ಹೆಗಡೆ ಖಂಡನೆ
ಬೆಂಗಳೂರು: ಮಲ್ಪೆ ಕಡಲ ತೀರದಿಂದ ಡಿ.13ರಂದು ಮೀನುಗಾರಿಕೆಗೆ ಹೊರಟ್ಟಿದ್ದ ಸುವರ್ಣ ತ್ರಿಭುಜ ಬೋಟು ನಾಪತ್ತೆಯಾಗಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಸರ್ಕಾರದ ನಿರ್ಲಕ್ಷ್ಯ ಹಾಗೂ ಉದಾಸಿನತೆಯನ್ನು ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ತೀವ್ರವಾಗಿ ಖಂಡಿಸಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು, ಮೀನುಗಾರಿಕೆಗೆ ತೆರಳಿದ ಮೀನುಗಾರರನ್ನು ಮತ್ತು ಬೋಟನ್ನು ಕೂಡಲೇ ಪತ್ತೆಹಚ್ಚುವಂತೆ ವಿನಂತಿಸಿಕೊಂಡಿದ್ದರು.
ಪತ್ರಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಈಗಾಗಲೇ ಭಾರತೀಯ ನೌಕ ಸೇನೆಯ ಕೋಸ್ಟರ್ ಗಾರ್ಡ್‌ನವರಿಗೆ ಮೀನುಗಾರರನ್ನು ಮತ್ತು ಬೋಟನ್ನು ಪತ್ತೆಗೆ ಹಚ್ಚಲು ನಿರ್ದೇಶನ ನೀಡಿದ್ದಾರೆ. ಜತೆಗೆ ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರೆಲ್ಲರೂ ಬೋಟು ಹುಡುಕುವ ಪ್ರಯತ್ನದಲ್ಲಿ ತೋಡಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕೆರೆ ಒತ್ತುವರಿ ಮಾಡಿದ್ದ ಮೂವರಿಗೆ 1ವರ್ಷ ಜೈಲು
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
MUST WATCH
ಹೊಸ ಸೇರ್ಪಡೆ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
Bengaluru: ಕೆರೆ ಒತ್ತುವರಿ ಮಾಡಿದ್ದ ಮೂವರಿಗೆ 1ವರ್ಷ ಜೈಲು
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.