ಪೀಣ್ಯ ಕೈಗಾರಿಕಾ ಟೌನ್‌ಶಿಪ್ ಅಭಿವೃದ್ಧಿಗೆ ಕ್ರಮ
Team Udayavani, Nov 12, 2017, 12:59 PM IST
ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶವನ್ನು ಕೈಗಾರಿಕಾ ಟೌನ್‌ಶಿಪ್ ಆಗಿ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಸಹಯೋಗದಲ್ಲಿ
“ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗ ಸಭೆ’ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ರೋಡ್ ಶೋಗೆ ಚಾಲನೆ ನೀಡಿದ ಮಾತನಾಡಿದ
ಅವರು, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಟೌನ್‌ಶಿಪ್ ನಿರ್ಮಾಣ ತ್ವರಿತವಾಗಿ ಆಗಬೇಕಿದೆ. ಟೌನ್‌ಶಿಪ್ ನಿರ್ಮಾಣ
ಸಂಬಂಧ ಕಡತದ ಅನುಮೋದನೆ ಮೇಲೆ ನಿಗಾ ಇರಿಸಲು ಕಾಸಿಯಾ ವತಿಯಿಂದ ಪ್ರತ್ಯೇಕ ತಂಡ ರಚಿಸಿದರೆ ಒಳಿತು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಸಣ್ಣ ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿಗಳು, ಸಣ್ಣ ಕೈಗಾರಿಕೆ ಸಚಿವರು ಹಾಗೂ ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಹೊಸ ಸ್ಟಾರ್ಟ್‌ಅಪ್‌ಗ್ಳನ್ನು ಗುರುತಿಸಿ ಪ್ರೋತ್ಸಾಹಿಸಲು ಕಾಸಿಯಾ ಆದ್ಯತೆ ನೀಡಬೇಕು. ಹೆಚ್ಚು ಉದ್ಯೋಗ ಸೃಷ್ಟಿಗೆ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಬೇಕು. ಈ ಹಿಂದೆ 15 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆ ನಿಡಲಾಗಿತ್ತು.
ಅದರಂತೆ ಕಳೆದ ನಾಲ್ಕೂವರೆ ವರ್ಷದಲ್ಲಿ 14 ಲಕ್ಷ ಉದ್ಯೋಗ ಸೃಷ್ಟಿಯಾಗಿದ್ದು, ದೇಶಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು. ಕಾಸಿಯಾ ಅಧ್ಯಕ್ಷ ಹನುಮಂತೇಗೌಡ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.