ರಾಜ್ಯ ಫಿಸಿಯೋಥೆರಪಿ ಕೌನ್ಸಿಲ್‌ ಸ್ಥಾಪನೆಗೆ ಕ್ರಮ


Team Udayavani, Sep 11, 2017, 11:54 AM IST

jayachandera.jpg

ಬೆಂಗಳೂರು: “ರಾಜ್ಯ ಫಿಸಿಯೋಥೆರಪಿ ಕೌನ್ಸಿಲ್‌’ ಸ್ಥಾಪನೆ ಕುರಿತ ಪ್ರಸ್ತಾವನೆ ಗಮನಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಭರವಸೆ ನೀಡಿದ್ದಾರೆ. ಭಾನುವಾರ ಖಾಸಗಿ ಹೋಟೆಲ್‌ನಲ್ಲಿ ಬೆಂಗಳೂರು ಫಿಸಿಯೋಥೆರಪಿ ನೆಟ್‌ವರ್ಕ್‌ ಸಂಘದ 7ನೇ ವಾರ್ಷಿಕೋತ್ಸವ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಮೂಳೆ, ಕೀಲು ನೋವು ಇತ್ಯಾದಿ ಸಮಸ್ಯೆಗಳಿಗೆ ವೈದ್ಯಕೀಯ ಔಷಧಗಳಿಗಿಂತ ಫಿಸಿಯೋಥೆರಪಿ ಚಿಕಿತ್ಸೆ ತುಂಬಾ ಸಹಕಾರಿಯಾಗಿವೆ ಎಂದ ಅವರು, ತಮಗೆ ಭುಜದ ನೋವು ಬಂದಾಗ ಫಿಸಿಯೋಥೆರಪಿಯಿಂದ ಗುಣಮುಖವಾಗಿದ್ದನ್ನು ಸ್ಮರಿಸಿದರು.

ಸಂಘದ ಅಧ್ಯಕ್ಷೆ ಡಾ.ಆರತಿ ಪ್ರಸಾದ್‌ ಮಾತನಾಡಿ, ಫಿಸಿಯೋಥೆರಪಿ ಆರೋಗ್ಯ ಕ್ಷೇತ್ರದ ಪ್ರಮುಖ ಅಂಗವಾಗಿದೆ. ಆದ್ದರಿಂದ ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಾರ್ಡ್‌ನ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಆಸ್ಪತ್ರೆಗಳಲ್ಲಿ ಫಿಸಿಯೋಥೆರಪಿಸ್ಟ್‌ಗಳ ಅಗತ್ಯತೆ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಫಿಸಿಯೋಥೆರಪಿಸ್ಟ್‌ಗಳನ್ನು ನೇಮಿಸಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಫಿಸಿಯೋಥೆರಪಿ ಚಿಕಿತ್ಸೆಯಲ್ಲಿ ಮತ್ತು ಶಿಕ್ಷಣದಲ್ಲಿ ಅನೇಕ ಬದಲಾವಣೆಗಳಾಗಿವೆ.ಜ್ಞಾನಾಧಾರಿತ ನಾಗರಿಕತೆಯಲ್ಲಿ ತಂತ್ರಜ್ಞಾನಗಳು ಬದಲಾಗಿದ್ದು, ಹೊಸ ಸಂಶೋಧನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಫಿಸಿಯೋಥೆರಪಿಸ್ಟ್‌ಗಳು ಹೊಸ ಅನ್ವೇಷಣೆಯಲ್ಲಿ ತೊಡಗಬೇಕು.

ಜತೆಗೆ ಸರ್ಕಾರಗಳು ಸಹ ಆಸ್ಪತ್ರೆಗಳಲ್ಲಿ ಫಿಸಿಯೋಥೆರಪಿ ವಿಭಾಗಗಳನ್ನು ತೆರೆದು, ಫಿಸಿಯೋಥೆರಪಿಸ್ಟ್‌ಗಳನ್ನು ನೇಮಿಸಿಕೊಳ್ಳಬೇಕು. ದೇಹಕ್ಕೆ ಪೆಟ್ಟಾದಾಗ ನೋವು ಉಂಟಾಗುತ್ತದೆ. ಅದು ಸ್ವಾಭಾವಿಕವಾಗಿ ಗುಣಮುಖವಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ಫಿಸಿಯೋಥೆರಪಿ ಸಹಕರಿಸುತ್ತದೆ.

ಇದರ ಕುರಿತು ಜನರಲ್ಲಿ ಅರಿವಿನ ಕೊರತೆ ಇದ್ದು, ಅದನ್ನು ಜಾಗೃತಗೊಳಿಸುವ ಕಾರ್ಯವನ್ನು ಮಾಡುವ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಬೆಂಗಳೂರು ಫಿಸಿಯೋಥೆರಪಿ ನೆಟ್‌ವರ್ಕ್‌ನ ಡಾ.ನವೀನ್‌, ಡಾ.ಧನಂಜಯನ್‌, ವಿಜೇಂದ್ರನ್‌, ಡಾ.ಪದ್ಮನಾಭನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.