ಶೇ.49 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

Team Udayavani, Jan 30, 2020, 3:09 AM IST

Suresh-Kumar

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕಾರ್ಮಿಕ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ಕಟ್ಟಡ ನಿರ್ಮಾಣ ಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣ ಕುರಿತು ಭಾರತೀಯ ನಿರ್ವಹಣಾ ಸಂಸ್ಥೆ ಬೆಂಗಳೂರು (ಐಐಎಂಬಿ)ನಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ಸಮಾವೇಶದಲ್ಲಿ ಮಾತ ನಾಡಿದ ಅವರು, ಕಾರ್ಮಿಕ ಇಲಾಖಾ ವ್ಯಾಪ್ತಿಯ ಕಾರ್ಮಿಕ ಕಲ್ಯಾಣ ಮಂಡಳಿಗೆ ಶೀಘ್ರ ದಲ್ಲೇ ಜಂಟಿ ಕಾರ್ಮಿಕ ಆಯುಕ್ತರನ್ನು ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದರು.

ಅಪಘಾತ, ಅವಘಡಗಳು ಸಂಭವಿಸಿದಾಗ ಕಾರ್ಮಿಕರಿಗೆ ನ್ಯಾಯಯುತವಾಗಿ ದೊರೆಯ ಬೇಕಾದ ಪರಿಹಾರವನ್ನು ಒದಗಿಸುವ ಬಗ್ಗೆ ಸೂಕ್ತ ತರಬೇತಿ ನೀಡುವ ಮೂಲಕ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು. 2016 ರಿಂದ ಕಾರ್ಮಿಕರ ಮಕ್ಕಳಿಗೆ ನೀಡಬೇಕಾದ ಶಿಷ್ಯ ವೇತನದ ಬಾಕಿಯನ್ನು ಕೂಡಲೇ ವಿತರಿಸಲು ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದರು.

ಕಾರ್ಮಿಕರ ಆನ್‌ಲೈನ್‌ ಹಾಗೂ ಆಫ್ಲೈನ್‌ ನೋಂದಣಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಟ್ಟಡ ಕಾರ್ಮಿಕರ ನೋಂದಣಿಯನ್ನು ತ್ವರಿತ ಗೊಳಿಸಲು ಕಟ್ಟಡಗಳು ನಿರ್ಮಾಣಗೊಳ್ಳುತ್ತಿರುವ ಸ್ಥಳಗಳಿಗೆ ಅಧಿಕಾರಿಗಳೇ ಮೊಬೈಲ್‌ ವ್ಯಾನ್‌ ಮೂಲಕ ತೆರಳಿ ಕಾರ್ಮಿಕರ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾದ ಕ್ರಮಕ್ಕೂ ಚಿಂತನೆ ನಡೆಸಲಿದ್ದೇವೆ ಎಂದು ಹೇಳಿದರು.

ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಮಾತನಾಡಿ, ನಮ್ಮ ನಗರಗಳಲ್ಲಿ ಕಾಣುವ ಕಟ್ಟಡಗಳಿಗಿಂತಲೂ ಗಗನಚುಂಬಿ ಕಟ್ಟಡಗಳನ್ನು ವಿದೇಶಗಳಲ್ಲಿ ನಿರ್ಮಿಸುತ್ತಿದ್ದಾರೆ. ಆದರೆ, ಅಲ್ಲಿ ಸಂಭವಿಸದ ಅವಘಡಗಳು ನಮ್ಮಲ್ಲೇಕೆ ಸಂಭವಿಸುತ್ತವೆ. ದೇಶದಲ್ಲಿ ಶೌಚಗುಂಡಿಯ ಶುಚಿ ಮಾಡುವ ಕಾರ್ಯದಲ್ಲಿ ಇಂದಿಗೂ ಹಲವರು ಮೃತಪಡುತ್ತಿದ್ದಾರೆ. ತಂತ್ರಜ್ಞಾನದ ಬಳಕೆಯಿಂದ ಕಟ್ಟಡ ಕಾರ್ಮಿಕರಿಗೆ ಆಗುವ ಅವಘಡಗಳನ್ನು ಹಾಗೂ ಸಾವುಗಳನ್ನು ತಡೆಗಟ್ಟಬಹುದು ಎಂದರು.

ಬೆಂಗಳೂರಿನಲ್ಲಿ 2015ರಲ್ಲಿ 89, 2016ರಲ್ಲಿ 50, 2017ರಲ್ಲಿ 64, 2018ರಲ್ಲಿ 75, 2019ರಲ್ಲಿ 70 ಹಾಗೂ 2020ರಲ್ಲಿ 8 ಮಂದಿ ಕಟ್ಟಡ ಕಾರ್ಮಿಕರು ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಅವಘಡಕ್ಕೆ ತುತ್ತಾಗಿ ಮೃತರಾಗಿರುತ್ತಾರೆ. ಈ ಘಟನೆಗಳಿಗೆ ಸಂಬಂಧಿಸಿದಂತೆ ಐ.ಪಿ.ಸಿ. 304 (ಎ) ಪ್ರಕಾರ ಕಂಟ್ರಾಕ್ಟರ್ ಮತ್ತು ಕಟ್ಟಡ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್‌ ಮೊದ ಲಾದವರು ಉಪಸ್ಥಿತರಿದ್ದರು.

ಹುದ್ದೆಗಳ ಭರ್ತಿಗೆ ವಕೀಲರ ಸಂಘ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಜಿಲ್ಲಾ ವೇದಿಕೆಯಲ್ಲಿ ಖಾಲಿ ಇರುವ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳ ಭರ್ತಿ ಮಾಡುವಂತೆ ಬೆಂಗಳೂರು ವಕೀಲರ ಸಂಘ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗ ನಾಥ್‌ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಆಯೋಗ ಮತ್ತು ಜಿಲ್ಲಾ ವೇದಿಕೆಗಳಲ್ಲಿ ಪ್ರಸ್ತುತ 30 ಸಾವಿರ ಪ್ರಕರಣಗಳು ಬಾಕಿ ಇವೆ. ರಾಜ್ಯ ಆಯೋಗದ ನ್ಯಾಯಾಂಗ ಸದಸ್ಯರ ಅವಧಿ 2019ರ ಜು.30 ರಂದು ಕೊನೆಗೊಂಡಿದ್ದು, ಅವಧಿ ವಿಸ್ತರಿಸಿಕೊಂಡು ಬರಲಾಗುತ್ತಿದೆ. ರಾಜ್ಯ ಆಯೋಗದ ಮಹಿಳಾ ಸದಸ್ಯರ ಹುದ್ದೆ 2018ರ ಫೆ.10ರಿಂದ ಖಾಲಿ ಇದೆ. ಇದಲ್ಲದೇ ಜಿಲ್ಲಾ ವೇದಿಕೆಗಳ 9 ಅಧ್ಯಕ್ಷರ ಹುದ್ದೆಗಳು ಹಾಗೂ 34 ಸದಸ್ಯರ ಹುದ್ದೆಗಳೂ ಖಾಲಿ ಇವೆ.

ಈ ವರ್ಷ ಇನ್ನಷ್ಟು ಹುದ್ದೆಗಳು ಖಾಲಿ ಆಗಲಿವೆ. ಇದರಿಂದ ಆಯೋಗದ ಕಾರ್ಯನಿರ್ವಹಣೆ ಹಾಗೂ ವ್ಯಾಜ್ಯಗಳ ವಿಲೇವಾರಿಯಲ್ಲಿ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ನೇಮಕಾತಿ ಸಮಿತಿ ಕೈಗೊಂಡಿರುವ ತೀರ್ಮಾನದಂತೆ ಆಯ್ಕೆ ಪಟ್ಟಿ ಅನುಸಾರ ನೇಮಕಾತಿ ಆದೇಶ ಹೊರಡಿಸುವ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.