ಪೊಲೀಸ್ ಇಲಾಖೆ ಬಲವರ್ಧನೆಗೆ ಕ್ರಮ
Team Udayavani, Jul 4, 2019, 3:06 AM IST
ಬೆಂಗಳೂರು: ಪೊಲೀಸ್ ಇಲಾಖೆಯನ್ನು ಬಲಗೊಳಿಸಲು ಅಮೂಲಾಗ್ರ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ಮಾಡಲು ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂ ತೆರೆದಿದ್ದೇವೆ. ಪೊಲೀಸ್ ಇಲಾಖೆ ಜನರ ಬಳಿಗೆ ಹೋಗುವಂತೆ ಮಾಡಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಗರುಡ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಫೋರ್ಸ್ ಒನ್, ತೆಲಂಗಾಣದಲ್ಲಿ ಅಕ್ಟೋಪಸ್ ಕಾರ್ಯಪಡೆಗಳಿವೆ. ಪೊಲೀಸ್ ವ್ಯವಸ್ಥೆ ಸುಧಾರಿಸಲು ಕರ್ನಾಟಕ ರಾಷ್ಟ್ರ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕಿದೆ. ಪೊಲೀಸ್ ಅಕಾಡೆಮಿಯನ್ನು ಇನ್ನಷ್ಟು ಬಲಗೊಳಿಸಬೇಕಿದೆ. ಎಲ್ಲದಕ್ಕೂ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.
ಪೊಲೀಸರ ನಡುವೆ ಸಮನ್ವಯತೆ ತರಲು ಸಮನ್ವಯ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿ ವರದಿ ನೀಡಿದ್ದು ಅನೇಕ ಶಿಫಾರಸ್ಸುಗಳನ್ನು ಮಾಡಿದೆ. ಒಂದು ಪೊಲೀಸ್ ಠಾಣೆಯಲ್ಲಿ ಇಬ್ಬರು ಇನ್ಸ್‌ಪೆಕ್ಟರ್ ಇರಬೇಕು. ಒಬ್ಬರು ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವುದು. ಮತ್ತೂಬ್ಬರು ತನಿಖೆ ನಡೆಸುವುದು.
ಪ್ರತಿಯೊಬ್ಬ ಅಧಿಕಾರಿಗೂ ಒಂದು ವ್ಯವಸ್ಥೆಯಲ್ಲಿ ನಿರ್ಧಿಷ್ಠ ಅವಧಿ ನಿಗದಿ ಪಡಿಸಲಾಗುವುದು. ಉದಾಹರಣೆಗೆ ನಾಲ್ಕು ವರ್ಷ ಯಾರು ಎಕ್ಸಿಕೇಟಿವ್ ಹುದ್ದೆಯಲ್ಲಿ ಕೆಸಲ ಮಾಡಿರುತ್ತಾರೆಯೋ, ಮುಂದಿನ ನಾಲ್ಕು ವರ್ಷ ನಾನ್ ಎಕ್ಸಿಕೇಟಿವ್ ಹುದ್ದೆಗೆ ವರ್ಗಾಯಿಸಲಾಗುವುದು. ಇದರಿಂದ ಎಲ್ಲರಿಗೂ ಸಮಾನಾಂತರ ಅವಕಾಶ ದೊರೆತಂತಾಗುವುದು.
ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಆದ್ಯತೆ: ಪೊಲೀಸ್ ಇಲಾಖೆಯಲ್ಲಿ ತನಿಖೆ ನಡೆಸಿರುವ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದ್ದು, ಅದನ್ನು ಹೆಚ್ಚಳ ಮಾಡುವತ್ತ ಗಮನ ಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಡ್ವೋಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಲಾಗಿದೆ. ಯಾವ ರೀತಿ ಪ್ರಕರಣಗಳ ತನಿಖೆ ನಡೆಸಬೇಕು.
ಪಬ್ಲಿಕ್ ಪ್ರಾಸಿಕ್ಯೂಟರ್ ಸಲಹೆ ಪಡೆದು ಚಾರ್ಜ್‌ಶೀಟ್ ಸಲ್ಲಿಸುವುದು. ನಂತರ ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿ ಏನು ಎನ್ನುವುದನ್ನೂ ನಿಗದಿ ಪಡಿಸಲಾಗುವುದು. ಈ ಮೂಲಕ ಅಪರಾಧ ಪ್ರಕರಣಗಳ ಶಿಕ್ಷೆ ಪ್ರಮಾಣವನ್ನು ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.