ನಟ ದುನಿಯಾ ವಿಜಯ್‌ ಜೈಲಿನಿಂದ ಬಿಡುಗಡೆ


Team Udayavani, Oct 2, 2018, 6:00 AM IST

duniya-vijay-and.jpg

ಬೆಂಗಳೂರು:ಜಿಮ್‌ ತರಬೇತುದಾರ ಮಾರುತಿಗೌಡ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದುನಿಯಾ ವಿಜಯ್‌  ಸೋಮವಾರ ಜಾಮೀನು ಆಧಾರದಲ್ಲಿ ಬಿಡುಗಡೆಗೊಂಡಿದ್ದಾರೆ.

ಪ್ರಕರಣದ  ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು  ಮಾನ್ಯ ಮಾಡಿದ ಸೆಷನ್ಸ್‌ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ವಿಜಯ್‌, ಪ್ರಸಾದ್‌, ಮಣಿ, ಕಾರು ಚಾಲಕ ಪ್ರಸಾದ್‌ನನ್ನು ಎಂಟು ದಿನಗಳ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಳಿಸಲಾಗಿದೆ.

ಸೋಮವಾರ ರಾತ್ರಿ 8-20ರ  ಸುಮಾರಿಗೆ ಜೈಲಿನಿಂದ ಹೊರಬಂದ ವಿಜಯ್‌ ಅವರನ್ನು ಎರಡನೇ ಪತ್ನಿ ಕೀರ್ತಿ ಪಟ್ವಾಡಿ ಬರಮಾಡಿಕೊಂಡರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ನಟ ವಿಜಯ್‌ “” ನಾನು ಯಾವುದೇ ತಪ್ಪು ಮಾಡಿಲ್ಲ. ರೌಡಿಶೀಟರ್‌ ಕೂಡ ಅಲ್ಲ. ಪ್ರಕರಣದಲ್ಲಿ ಕಾಣದ ಕೈಗಳು ಕೆಲಸ ಮಾಡಿವೆ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ. ಜತೆಗೆ, ಪಾನಿಪೂರಿ ಕಿಟ್ಟಿ ಮೇಲೆಯೂ ನನಗೆ ಯಾವುದೇ ದ್ವೇಷವಿಲ್ಲ ಎಂದಿದ್ದಾರೆ.

ಅಂಬೇಡ್ಕರ್‌ ಭವನದಲ್ಲಿ ಸೆ.22ರಂದು ನಡೆದ “32ನೇ ಅಮೇಚೂರ್‌ ಬಾಡಿ ಬಿಲ್ಡಿಂಗ್‌ ಚಾಂಪಿಯನ್‌ ಶಿಪ್‌, ಮಿಸ್ಟರ್‌ ಬೆಂಗಳೂರು -2018′ ಸ್ಪರ್ಧೆ ಕಾರ್ಯಕ್ರಮದ ವೇಳೆ ಜಿಮ್‌ ತರಬೇತುದಾರ ಮಾರುತಿ ಗೌಡ  ಜತೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಆತನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ವಿಜಯ್‌ , ಪ್ರಸಾದ್‌,  ಮಣಿ, ಪ್ರಸಾದ್‌  ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ನಾಯಕ ನಟ ಸಮಾಜಕ್ಕೆ ಮಾದರಿಯಾಗಿರಬೇಕು!
ಸಿನಿಮಾಗಳಲ್ಲಿ ನಾಯಕ ನಟನಾಗಿರುವವರು ಸಮಾಜಕ್ಕೆ ಮಾದರಿಯಾಗಿರಬೇಕು. ಜನರು ಅವರನ್ನು ಗಮನಿಸುತ್ತಿರುತ್ತಾರೆ. ಮುಂದೆ ಇಂತಹ ತಪ್ಪುಗಳು ಆಗದಂತೆ ಎಚ್ಚರವಹಿಸುವಂತೆ ನಟ ವಿಜಯ್‌ಗೆ ನ್ಯಾಯಾಧೀಶರು ಮೌಖೀಕ ಸಲಹೆ ನೀಡಿದ್ದಾರೆ.ನಟ ವಿಜಯ್‌ಗೆ ಜಾಮೀನು ನೀಡುವ ವೇಳೆ ನ್ಯಾಯಾಧೀಶರು ಮೌಖೀಕವಾಗಿ ಸಲಹೆಗಳನ್ನು ನೀಡಿದ್ದು ಅವರಿಗೆ ತಿಳಿಸುತ್ತೇನೆ ಎಂದು ವಿಜಯ್‌ ಪರ ವಕೀಲ ಶಿವಕುಮಾರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.