ಹಿರಿಯ ಕಲಾವಿದೆ ಕೃಷ್ಣಕುಮಾರಿ ನಿಧನ
Team Udayavani, Jan 25, 2018, 6:50 AM IST
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಲನಚಿತ್ರ ಹಿರಿಯ ಕಲಾವಿದೆ ಕೃಷ್ಣಕುಮಾರಿ (83)
ಬುಧವಾರ ಮುಂಜಾನೆ ನಿಧನರಾಗಿದ್ದಾರೆ.
ಮೂಳೆ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಅನಾರೋಗ್ಯ ತೀವ್ರಗೊಂಡು ಕೊನೆಯುಸಿರೆಳೆದಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿರುವ ಅವರು, “ಇಂಡಿಯನ್ ಎಕ್ಸ್ ಪ್ರಸ್’ ಪತ್ರಿಕೆಯ ಮಾಜಿ ಸಂಪಾದಕ ಅಜಯ… ಮೋಹನ್ ಖೈತಾನ್ ಅವರನ್ನು ವಿವಾಹವಾಗಿದ್ದರು. ಪುತ್ರಿ ದೀಪಿಕಾ, ಅಳಿಯ ವಿಕ್ರಮ್ ಮತ್ತು ಮೊಮ್ಮಗ ಪವನ್ ಜೊತೆಗೆ ಕೃಷ್ಣಕುಮಾರಿ ಬೆಂಗಳೂರಿನಲ್ಲಿ ನೆಲೆಸಿದ್ದರು. 1951ರಲ್ಲಿ ಬಿಡುಗಡೆಯಾದ “ನವ್ವುತೆ ನವರತ್ನಾಲು’ ಚಿತ್ರದಿಂದ ಕೃಷ್ಣಕುಮಾರಿ ಅವರು ಚಿತ್ರರಂಗಕ್ಕೆ ಪ್ರವೇಶಿಸಿದರು. 60ರ ದಶಕದ ಖ್ಯಾತ ನಟಿ ಎನಿಸಿಕೊಂಡಿದ್ದ ಅವರು, ತಮಿಳು, ಕನ್ನಡ ಸೇರಿದಂತೆ ಮಲಯಾಳಂ ಭಾಷಾಚಿತ್ರಗಳಲ್ಲೂ ನಟಿಸಿದ್ದರು. ತೆಲುಗು ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ಭಕ್ತ ಕನಕದಾಸ, ಸ್ವರ್ಣಗೌರಿ, ಸತಿ ಸಾವಿತ್ರಿ ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಬಹುಭಾಷಾ ಹಿರಿಯ ತಾರೆ “ಸಾಹುಕಾರ್ ಜಾನಕಿ’ ಸಹೋದರಿ ಕೂಡ ಹೌದು.
ನಾವಿಬ್ಬರು ಗೆಳತಿಯರಂತಿದ್ದೆವು. ಕಷ್ಟ ಸುಖಗಳಿಗೆ ಭಾಗಿಯಾಗುತ್ತಿದ್ದೆವು. ಕೃಷ್ಣಕುಮಾರಿ ಯಾರಿಗೇ ಆಗಲಿ, ನೇರವಾಗಿ ಮಾತಾಡುವ ಸ್ವಭಾವದವಳಾಗಿರಲಿಲ್ಲ. ಎಷ್ಟೇ ಕಷ್ಟವಿದ್ದರೂ ಅದನ್ನು ಹೇಳಿಕೊಳ್ಳುತ್ತಿರಲಿಲ್ಲ. ಅವಳನ್ನು ಕಳೆದುಕೊಂಡಿದ್ದು ತುಂಬಾ ದುಃಖ ತಂದಿದೆ. ನನ್ನ ಶರೀರದ ಒಂದು ಭಾಗ ಕಳೆದು ಹೋದಂತಾಗಿದೆ.
– ಸಾಹುಕಾರ್ ಜಾನಕಿ, ಸಹೋದರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.