ಐಟಿ ವಿಚಾರಣೆಗೆ ಹಾಜರಾದ ನಟ ಯಶ್
Team Udayavani, Jan 12, 2019, 12:30 AM IST
ಬೆಂಗಳೂರು: ಸ್ಯಾಂಡಲ್ವುಡ್ ನಟ ಯಶ್ ಹಾಗೂ ಅವರ ತಾಯಿ ಪುಷ್ಪಾ ಅವರನ್ನು ಶುಕ್ರವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಕೆಲದಿನಗಳ ಹಿಂದೆ ನಟ ಯಶ್ ನಿವಾಸ ಸೇರಿ ಇನ್ನಿತರೆ ಕಡೆ ದಾಳಿ ನಡೆಸಿ ಸ್ಥಿರಾಸ್ತಿ ಹಾಗೂ ಚರಾಸ್ತಿಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದ ಐಟಿ ಅಧಿಕಾರಿಗಳು, ಅವುಗಳ ಪರಿಶೀಲನೆಯಲ್ಲಿ ತೊಡಗಿದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು.
ಈ ಹಿನ್ನೆಲೆಯಲ್ಲಿ ತಮ್ಮ ತಾಯಿ ಜತೆ ವಿಚಾರಣೆಗೆ ಆಗಮಿಸಿದ ಯಶ್ ಅವರನ್ನು ಎರಡೂವರೆ ಗಂಟೆಗಳಿಗೂ ಅಧಿಕ ಕಾಲ ವಿಚಾರಣೆಗೊಳಪಡಿಸಿದ ಅಧಿಕಾರಿಗಳು, ಜಪ್ತಿ ಪಡಿಸಿಕೊಂಡಿರುವ ದಾಖಲೆಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ವಿಚಾರಣೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಯಶ್, ಸಮಾಜದ ಕಣ್ತಪ್ಪಿಸಿ ಏನು ಮಾಡಲು ಸಾಧ್ಯವಿಲ್ಲ. ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಇದು ಸದ್ಯಕ್ಕೆ ಮುಗಿಯುವ ವಿಚಾರಣೆಯಲ್ಲ.ಇನ್ನೂ ಎರಡು ವರ್ಷಗಳ ಕಾಲ ನಡೆಯಬಹುದು. ಐಟಿ ಅಧಿಕಾರಿಗಳು ಪುನ: ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.