ಎಫ್ಐಆರ್ ರದ್ದು ಕೋರಿದ ನಟಿ ಶೃತಿ
Team Udayavani, Nov 14, 2018, 11:51 AM IST
ಬೆಂಗಳೂರು: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ನಟಿ ಶೃತಿ ಹರಿಹರನ್ ಅವರು ಹೈಕೋರ್ಟ್ ಮೊರೆಹೋಗಿದ್ದಾರೆ.
ತಮ್ಮ ವಿರುದ್ಧ ನಿರಾಧಾರ ಆರೋಪಗಳನ್ನು ಮಾಡಿ ದುರುದ್ದೇಶಪೂರ್ವಕವಾಗಿ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಸುಳ್ಳು ಆರೋಪಗಳ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್‌ನಲ್ಲಿ ದಾಖಲಾದ ಯಾವುದೇ ಆರೋಪಗಳಲ್ಲಿಯೂ ತಾವು ಭಾಗಿಯಾಗಿಲ್ಲ.
ಹೀಗಾಗಿ, ಎಫ್ಐಆರ್ ರದ್ದುಗೊಳಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ. “ವಿಸ್ಮಯ’ ಚಲನಚಿತ್ರದ ಶೂಟಿಂಗ್ ವೇಳೆ ನಟ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮಿ ಟೂ ಅಭಿಯಾನದಲ್ಲಿ ನಟಿ ಶೃತಿ ಹರಿಹರನ್ ಆರೋಪಿಸಿದ್ದರು.
ಈ ವಿವಾದದ ಬೆನ್ನಲ್ಲೇ ಅರ್ಜುನ್ ಸರ್ಜಾ ಆಪ್ತ ಶ್ರೀರಾಂ ಫಿಲಂ ಇಂಟರ್‌ನ್ಯಾಷನಲ್ ಸಂಸ್ಥೆಯ ಶಿವ, ನಟಿ ಶ್ರುತಿ ಹರಿಹರನ್ ಹಾಗೂ ಇತರರು ಅರ್ಜುನ್ ಸರ್ಜಾರ ವೈಯಕ್ತಿಕ ಮಾಹಿತಿ ಬಳಸಿ ಫೇಸ್‌ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.