ಟೋಯಿಂಗ್ ಸಿಬ್ಬಂದಿಗೆ ಎಡಿಸಿಪಿ ತರಾಟೆ
Team Udayavani, Jul 2, 2019, 3:03 AM IST
ಬೆಂಗಳೂರು: ನಿಷೇಧಿತ ಪ್ರದೇಶಗಳಲ್ಲಿ ನಿಂತಿದ್ದ ವಾಹನಗಳನ್ನು ಟೋಯಿಂಗ್ ಮಾಡುವ ಏಜೆನ್ಸಿ ಸಿಬ್ಬಂದಿ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಸೋಮವಾರ ಅಶೋಕನಗರ ಮೈದಾನದಲ್ಲಿ ಟೋಯಿಂಗ್ ಮಾಡುವ ಏಜೆನ್ಸಿಗಳ ಪ್ರತಿನಿಧಿಗಳ ಪರೇಡ್ ನಡೆಸಿ ನಿಯಮ ಉಲ್ಲಂಘನೆ ಮಾಡದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಟೋಯಿಂಗ್ ವಾಹನ ಸಿಬ್ಬಂದಿಯೇ ನಿಯಮಗಳನ್ನು ಉಲ್ಲಂಘಿಸುವುದು, ಟೋಯಿಂಗ್ ಮಾಡಿದ ವಾಹನಗಳಿಗೆ ಹಾನಿ ಆದರೂ ವಾಹನ ಮಾಲೀಕರ ವಿರುದ್ಧವೇ ಅಸಡ್ಡೆಯಿಂದ ವರ್ತಿಸುತ್ತಿರುವ ಬಗ್ಗೆ ನೂರಾರು ಮಂದಿ ವಾಹನ ಸವಾರರರಿಂದ ನೇರವಾಗಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ದೂರುಗಳು ಬರುತ್ತಿದ್ದವು.
ಈ ಹಿನ್ನೆಲೆಯಲ್ಲಿ ಸೋಮವಾರ ಸಂಚಾರ ವಿಭಾಗಗಳ ಎಲ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಟೋಯಿಂಗ್ ಏಜೆನ್ಸಿ ಸಿಬ್ಬಂದಿ ಪರೇಡ್ ನಡೆಸಿದ್ದು, ಕೆಲ ಟೋಯಿಂಗ್ ವಾಹನಗಳನ್ನು ಖುದ್ದು ಪರಿಶೀಲಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟೋಯಿಂಗ್ ಮಾಡುವ ಯುವಕರ ಪೂರ್ವಾಪರ ಪರಿಶೀಲಿಸಿ, ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಅವರ ವಿವರ ನೊಂದಾಯಿಸಬೇಕು. ಸಮವಸ್ತ್ರ ಧರಿಸಬೇಕು. ಪ್ರಮುಖವಾಗಿ ಸಾರ್ವಜನಿಕರ ಜತೆ ಸಿಬ್ಬಂದಿ ಸರಿಯಾಗಿ ವರ್ತಿಸಬೇಕು. ಈ ಎಲ್ಲ ನಿಯಮಗಳನ್ನು ಪಾಲಿಸದಿದ್ದರೆ ಕೂಡಲೇ ಟೆಂಡರ್ ರದ್ದು ಪಡಿಸಲಾಗುವುದು.
ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಮೊದಲು ಆ ವಾಹನದ ಸಂಖ್ಯೆಯನ್ನು ಮೂರು ಬಾರಿ ಧ್ವನಿವರ್ಧಕದ ಮೂಲಕ ವಾಹನದ ಮಾಲೀಕರಿಗೆ ಎಚ್ಚರಿಕೆ ಕೊಡಬೇಕು. ಮೈಕ್‌ನಲ್ಲಿ ಕೂಗಿದಾಗ ವಾಹನ ಮಾಲೀಕರು ಓಡಿ ಬಂದರೆ ಅಥವಾ ವಾಹನಗಳನ್ನು ಟೋಯಿಂಗ್ ಮಾಡುವಂತಿಲ್ಲ.
ನಿಲುಗಡೆ ನಿಷೇದ ಪ್ರದೇಶದಲ್ಲಿ ವಾಹನ ನಿಲ್ಲಿಸಿದ್ದಕ್ಕೆ ದಂಡ ಹಾಕಬಹುದು ಎಂದು ಹರಿಶೇಖರನ್ ಎಚ್ಚರಿಕೆ ನೀಡಿದರು. ಇದರೊಂದಿಗೆ ಸಂಚಾರ ವಿಭಾಗದ ಇನ್‌ಸ್ಪೆಕ್ಟರ್, ಪಿಎಸ್‌ಐ, ಎಎಸ್‌ಐಗಳು ಮಾತ್ರ ದಂಡದ ಮೊತ್ತ ಸಂಗ್ರಹಿಸಬೇಕು. ಒಂದು ವೇಳೆ ಕಾನೂನು ನಿಗದಿಗಿಂತ ಹೆಚ್ಚಿನ ಮೊತ್ತವನ್ನು ಸಂಗ್ರಹಿಸುವುದು, ರಸೀದಿ ನೀಡದಿರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಅಧಿಕಾರಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೂ ಬಿಸಿ ಮುಟ್ಟಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್, ನಗರಾದ್ಯಂತ 44 ಸಂಚಾರ ಪೊಲೀಸ್ ಠಾಣೆಗಳಿವೆ. ಟೋಯಿಂಗ್ ಮಾಡಲು 86 ವಾಹನಗಳಿವೆ. ಈ ವೇಳೆ ಟೋಯಿಂಗ್ ಸಿಬ್ಬಂದಿ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಪರೇಡ್ ನಡೆಸಲಾಗಿದ್ದು, ಕಾನೂನು ನಿಯಮ ಪಾಲನೆ ಮಾಡಬೇಕೆಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
ಪ್ರಮುಖ ಅಂಶಗಳು: ಟೋಯಿಂಗ್ ವಾಹನದ ಉಸ್ತುವಾರಿ ಅಧಿಕಾರಿಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳೇನು? ಟೋಯಿಂಗ್ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ(ಚಾಲಕ, ವಾಹನ ಎತ್ತುವ ಸಹಾಯಕರು) ಪಾತ್ರ ಮತ್ತು ಹೊಣೆಗಾರಿಕೆ.
ಟೋಯಿಂಗ್ ಕಾರ್ಯಾಚರಣೆ ವೇಳೆ(ಉಸ್ತುವಾರಿ ಅಧಿಕಾರಿ ಮತ್ತು ಟೋಯಿಂಗ್ ಸಿಬ್ಬಂದಿ) ಶಿಷ್ಟಾಚಾರದ ವರ್ತನೆಗಳು ಬಗ್ಗೆ ಸೂಕ್ತ ನಿರ್ದೇಶನ ಹಾಗೂ ವಿಶೇಷ ಕರ್ತವ್ಯಗಳ ಸಮಯದಲ್ಲಿ ಟೋಯಿಂಗ್ ವಾಹನ ಬಳಕೆ,ಟೋಯಿಂಗ್ ವಾಹನದಲ್ಲಿ ಇಡಬೇಕಾದ ಸಂಚಾರ ಉಪಕರಣಗಳು ಬಗ್ಗೆ ಮಾಹಿತಿ ಪರೇಡ್‌ನಲ್ಲಿ ಮಾಹಿತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.