ಲಾಕ್ ಡೌನ್ : ಊರಿಗೆ ತಲುಪಲು 12 ಸಾವಿರಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ : ಸಚಿವ ಸವದಿ
Team Udayavani, Apr 26, 2021, 9:48 PM IST
ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ 12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸೋಮವಾರ ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಸವದಿ ಅವರು, ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ ಎಂದು ತಿಳಿಸಿದ್ದಾರೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ ಒಳಗೆ ಸಂಚರಿಸಲಿರುವ ಬಸ್ಸುಗಳ ಈ ವಿಶೇಷ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೇಳಿ ಕೊಂಡಿದ್ದಾರೆ.
ನಾಳೆ ರಾತ್ರಿಯ ಒಳಗೆ ತಮ್ಮ ಸ್ಥಳಕ್ಕೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ, ನಿಗದಿತ ಕೋವಿಡ್ ಮಾರ್ಗಸೂಚಿ ಅನ್ವಯ ಮುಂಜಾಗ್ರತೆ ವಹಿಸಿ ಈ ಸಾರಿಗೆ ವ್ಯವಸ್ಥೆಯನ್ನು ಸೂಕ್ತವಾಗಿ ಬಳಸಿಕೊಳ್ಳಬಹುದಾಗಿದೆ ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.