ಒಕ್ಕಲಿಗರ ಸಂಘಕ್ಕೆ ಆಡಳಿತಾಧಿಕಾರಿ: ಹೈಕೋರ್ಟ್ ನೋಟಿಸ್
Team Udayavani, Aug 30, 2018, 12:34 PM IST
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿ ಸಂಬಂಧ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಸಂಘದ ನಿರ್ದೇಶಕ ಡಾ. ಶಿವಲಿಂಗಯ್ಯ, ಪ್ರಭಾರ ಕಾರ್ಯದರ್ಶಿ ಎಚ್.ಎಂ ನಾರಾಯಣಮೂರ್ತಿ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ರಾಜ್ಯಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಂಘದ ಆಡಳಿತಾಧಿಕಾರಿಯಾಗಿರುವ ಎಚ್.ಎಸ್ ಅಶೋಕಾನಂದ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಆಡಳಿತಾಧಿಕಾರಿ ಸಂಘದ ಬ್ಯಾಂಕ್ ವ್ಯವಹಾರಗಳನ್ನು ನಡೆಸಬಾರದು. ಚೆಕ್‌ಗಳಿಗೆ ಸಹಿ ಮಾಡುವಂತಿಲ್ಲ. ನೀತಿ ನಿಯಮಗಳನ್ನು ರೂಪಿಸಬಾರದು ಎಂದು ನಿರ್ದೇಶಿಸಿ ಸೆ.4ಕ್ಕೆ ವಿಚಾರಣೆ ಮುಂದೂಡಿತು.ರಾಜ್ಯ ಒಕ್ಕಲಿಗರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಎಚ್.ಎಸ್ ಯೋಗಾನಂದ ಅವರನ್ನು ನೇಮಕಗೊಳಿಸಿ ರಾಜ್ಯಸರ್ಕಾರ ಆಗಸ್ಟ್ 20ರಂದು ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.