ಸಡಗರ-ಸಂಭ್ರಮದ ರಂಜಾನ್‌ ಆಚರಣೆ


Team Udayavani, Jun 27, 2017, 11:23 AM IST

ramzan.jpg

ಬೆಂಗಳೂರು: ಪವಿತ್ರ ರಂಜಾನ್‌ ಹಬ್ಬವನ್ನು ರಾಜಧಾನಿಯಲ್ಲಿ ಸೋಮವಾರ ಸಡಗರ -ಸಂಭ್ರಮದಿಂದ ಆಚರಿಸಲಾಯಿತು. ಒಂದು ತಿಂಗಳ ಉಪವಾಸ ವ್ರತಾಚರಣೆ ನಂತರ ಮುಸ್ಲಿಂ ಬಾಂಧವರು ಬಿಳಿ ಹಾಗೂ ವಿವಿಧ ಬಣ್ಣದ ಕುರ್ತಾ ಹಾಗೂ ಟೋಪಿ ಧರಿಸಿ ಈದ್ಗಾ ಮೈದಾನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಸಂಭ್ರದಿಂದ ತೆರಳುವ ದೃಶ್ಯ ನಗರದೆಲ್ಲೆಡೆ ಸಾಮಾನ್ಯವಾಗಿತ್ತು.

ಪ್ರಾರ್ಥನೆಯ ನಂತರ ಪರಸ್ಪರ ಶುಭಾಶಯ ಕೋರಿಕೆ, ಪರಸ್ಪರ ಆಲಿಂಗನ ಮಾಡುವ ಮೂಲಕ ಹಬ್ಬದ ಸಂದೇಶವನ್ನು ಹಂಚಿಕೊಂಡರು. ಕೆಲವೆಡೆ ಸಿಹಿ ವಿತರಣೆಯೂ ನಡೆಯಿತು.  ಮಿಲ್ಲರ್ ರಸ್ತೆ, ಮೈಸೂರು ರಸ್ತೆ, ಟ್ಯಾನರಿ ರಸ್ತೆ, ಕಲಾಸಿಪಾಳ್ಯಂ, ಯಶವಂತಪುರ, ಜಗಜೀವನ್‌ರಾಂ ನಗರ, ಬನ್ನೇರುಘಟ್ಟ ರಸ್ತೆ, ಹೊಸೂರು ರಸ್ತೆ,  ಜಾನ್ಸನ್‌ ಮಾರ್ಕೆಟ್‌, ತಿಲಕ್‌ ನಗರ, ಇಲಿಯಾಸ್‌ ನಗರ, ಜೆಪಿ ನಗರದ ಈದ್ಗಾ ಮೈದಾನ ಹಾಗೂ ಮಸೀದಿಗಳಲ್ಲಿ ಆಯೋಜಿಸಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. 

ನಾಗವಾರದ ಅರೇಬಿಕ್‌ ಕಾಲೇಜು ಆವರಣದಲ್ಲಿ ಬೆಳಗ್ಗೆ 9 ಗಂಟೆಗೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಉಪಸ್ಥಿತರಿದ್ದು, ಮುಸ್ಲಿಂ ಬಾಂಧವರಿಗೆ ಶುಭ ಹಾರೈಸಿದರು. 

ಎಲ್ಲೆಡೆ ಶಾಂತಿ ನೆಲೆಸಿ, ಎಲ್ಲರೂ ಶಾಂತಿಯುತವಾಗಿ ಬಾಳುವಂತಾಗಲಿ. ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಮುಂಬರುವ ದಿನಗಳಲ್ಲಿ ಉತ್ತಮ ಮಳೆಗಾಗಿ ಪ್ರಾರ್ಥನೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬರ ಪರಿಸ್ಥಿತಿ ಕೊನೆಗೊಳ್ಳಲಿದೆ ಎಂದು ಆಶಾ ಭಾವನೆ ವ್ಯಕ್ತಪಡಿಸಿದರು.

ಪೊಲೀಸ್‌ ಬಂದೋಬಸ್ತ್: ರಂಜಾನ್‌ ಆಚರಣೆ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆಯಾಗಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಂಜಾನ್‌ ಸಾಮೂಹಿಕ ಪ್ರಾರ್ಥನೆ ನಡೆಯುವ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದ್ದು, ಕೆಲವು ಮುಖ್ಯರಸ್ತೆಗಳಲ್ಲಿ ಪರ್ಯಾಯ ಸಂಪರ್ಕ ವ್ಯವಸ್ಥೆ ಮಾಡಲಾಗಿತ್ತು. ಹೊಯ್ಸಳ ಸೇರಿ ಅಲ್ಲಲ್ಲಿ ಪೊಲೀಸ್‌ ಗಸ್ತು ವಾಹನ ಸುತ್ತಾಡುತ್ತಿದ್ದು, ಸಂಚಾರ ನಿಯಂತ್ರಣಕ್ಕೆ ಹೆಚ್ಚುವರಿ ಟ್ರಾಫಿಕ್‌ ಪೊಲೀಸರನ್ನು ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.